ನಗರದ ಸೇವಾ ಭಾರತಿ ಪಬ್ಲಿಕ್ ಶಾಲೆಯಲ್ಲಿ ಮಕ್ಕಳ ರಕ್ಷಣಾ ನಿರ್ದೇಶನಾಲಯ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೋಲೀಸ್ ಇಲಾಖೆ, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಮಕ್ಕಳ ಹಕ್ಕುಗಳ ರಕ್ಷಣೆ ಹಾಗೂ ಬಾಲ್ಯವಿವಾಹ ಮುಕ್ತ ಭಾರತ್ ಅಭಿಯಾನ ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.