ಮಾನವೀಯ ಮೌಲ್ಯದತ್ತ ವಿದ್ಯಾರ್ಥಿಗಳು ಗಮನಹರಿಸಿ

HNP- Poli tech 2
ಹೊಳೆನರಸೀಪುರ ಪಟ್ಟಣದ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜು ಆವರಣದಲ್ಲಿ ಗುರುವಾರ ಆಯೋಜಿಸಿದ್ದ 2024-25ನೇ ಸಾಲಿನ ವಿದ್ಯಾರ್ಥಿ ಮತ್ತು ಕ್ರೀಡಾ ಸಂಘದ ಸಮಾರೋಪ ಸಮಾರಂಭ ಹಾಗೂ ಕಾಲೇಜು ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಿತು.
Published on

ಹೊಳೆನರಸೀಪುರ: ಮಾನವೀಯ ಮೌಲ್ಯಗಳನ್ನು ಅನುಸರಿಸುವ ಕಡೆ ವಿದ್ಯಾರ್ಥಿಗಳು ಗಮನ ಕೇಂದ್ರೀಕರಿಸಬೇಕು ಎಂದು ಹಾಸನ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಿ.ಪಿ.ಗಿರೀಶ್ ಹೇಳಿದರು.

ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಪಟ್ಟಣದ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜು ಆವರಣದಲ್ಲಿ ಗುರುವಾರ ಆಯೋಜಿಸಿದ್ದ 2024-25ನೇ ಸಾಲಿನ ವಿದ್ಯಾರ್ಥಿ ಮತ್ತು ಕ್ರೀಡಾ ಸಂಘದ ಸಮಾರೋಪ ಸಮಾರಂಭ ಹಾಗೂ ಕಾಲೇಜು ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ. ವಿದ್ಯಾರ್ಥಿಗಳು ಡಿಪ್ಲೊಮಾ ತರಬೇತಿಗೆ ಸೀಮಿತವಾಗಬಾರದು. ಮುಗಿದ ಬಳಿಕ ಇಂಜಿನಿಯರಿಂಗ್ ಪದವಿಯನ್ನು ಅಭ್ಯಾಸ ಮಾಡಬೇಕು ಎಂದು ಸಲಹೆ ನೀಡಿದರು.

ತಾಂತ್ರಿಕ ಶಿಕ್ಷಣ ಇಲಾಖೆ ಉನ್ನತ ವ್ಯಾಸಂಗ ಮಾಡಲು ಜಿಲ್ಲೆಯಲ್ಲಿ ಸರ್ಕಾರ ಇಂಜಿನಿಯರಿಂಗ್ ಕಾಲೇಜುಗಳನ್ನು ತೆರೆದಿದೆ. ಸರ್ಕಾರ ವಿದ್ಯಾಭ್ಯಾಸಕ್ಕಾಗಿಯೇ ಹಲವು ಮೂಲ ಸೌಕರ್ಯಗಳನ್ನು ಒದಗಿಸುವುದರ ಜತೆಗೆ ಹತ್ತಾರು ಯೋಜನೆಗಳನ್ನು ಜಾರಿಗೆ ತಂದಿದೆ. ಪದವೀಧರರು ಅದನ್ನು ದುರುಪಯೋಗಪಡಿಸಿಕೊಳ್ಳದೆ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

ಡಿಪ್ಲೊಮಾ ಹಾಗೂ ಇಂಜಿನಿಯರಿಂಗ್ ಶಿಕ್ಷಣ ನೀಡಲು ಸರ್ಕಾರ ಉತ್ತಮ ಕಟ್ಟಡದ ವ್ಯವಸ್ಥೆ ಹಾಗೂ ಸಲಕರಣೆಗಳನ್ನು ಒದಗಿಸಿ ಕೊಟ್ಟಿದೆ. ಖಾಸಗಿ ಕಾಲೇಜುಗಳನ್ನು ಮೀರಿಸುವಷ್ಟು ಸರ್ಕಾರಿ ಕಾಲೇಜುಗಳು ಇದ್ದರೂ ಕೂಡ ಖಾಸಗಿ ಕಾಲೇಜುಗಳ ಕಡೆ ಮುಖ ಮಾಡುವುದು ಸರಿಯಲ್ಲ ಎಂದರು.

ನಿವೃತ್ತ ಪ್ರಾಂಶುಪಾಲ ಎಚ್.ಎಸ್.ಪುಟ್ಟಸೋಮಪ್ಪ ಮಾತನಾಡಿ, ತಾಲೂಕಿನಲ್ಲಿ ಪ್ರತ್ಯೇಕವಾಗಿ ಹೆಣ್ಣು ಮಕ್ಕಳ ಕಾಲೇಜನ್ನು ತೆರೆಯಲಾಗಿದೆ. ಹೆಣ್ಣು ಮಕ್ಕಳಿಗೆ ವಿಶೇಷವಾಗಿ ವಿದ್ಯಾಭ್ಯಾಸ ಮಾಡಲು ಸುಸಜ್ಜಿತವಾದ ಕಟ್ಟಡ ಗ್ರಂಥಾಲಯ ಎಲ್ಲ ಸೌಲಭ್ಯಗಳನ್ನು ಒದಗಿಸಲಾಗಿದೆ. ವರ್ಷದ ಅಂತ್ಯದಲ್ಲಿ ವಾರ್ಷಿಕೋತ್ಸವ ಸಮಾರಂಭವನ್ನು ಏರ್ಪಡಿಸಿದ್ದೀರಿ. ಇದು ಒಳ್ಳೆಯ ಬೆಳವಣಿಗೆಯಾಗಿದೆ. ಹೆಣ್ಣು ಮಕ್ಕಳು ಕ್ರೀಡೆ, ಎನ್‌ಎಸ್‌ಎಸ್ ವಿಭಾಗದಲ್ಲಿ ಮಂಗಳೂರಿನಲ್ಲಿ ನಡೆದ ಕ್ರೀಡೆಯಲ್ಲಿ ಉತ್ತಮ ಸಾಧನ ಮಾಡಿರುವುದು ಪ್ರಸಂಶನೀಯವಾಗಿದೆ. ಚೆನ್ನಾಗಿ ಓದಿ ಪಾಲಕರಿಗೆ ಕಾಲೇಜಿಗೆ ಒಳ್ಳೆಯ ಹೆಸರು ಬೇಕು. ಪಾಲಕರು ಮಕ್ಕಳನ್ನು ಮುಂದಿನ ಭವಿಷ್ಯದಲ್ಲಿ ನಮಗೆ ಬೆಳಕಾಗುತ್ತಾರೆ ಎಂದು ಹೆಚ್ಚು ಕಾಳಜಿ ಇಟ್ಟುಕೊಂಡು ಓದಿಸುತ್ತಿದ್ದಾರೆ. ಎಲ್ಲರೂ ತಮ್ಮ ಜೀವನ ರೂಪಿಸಿಕೊಂಡು ಆದರ್ಶ ವಿದ್ಯಾರ್ಥಿಗಳಾಗಬೇಕು ಎಂದು ಕಿವಿಮಾತು ಹೇಳಿದರು.

ಆಶಾರಾಣಿ ಅಧ್ಯಕ್ಷತೆ ವಹಿಸಿದ್ದರು. ತಟ್ಟೆಕೆರೆ ಡಿಪ್ಲೊಮಾ ಕಾಲೇಜಿನ ಚಂದ್ರಕಾಂತ್, ಉಪ ವಿಭಾಗಾಧಿಕಾರಿ ಜಯರಾಮ್, ಉಪನ್ಯಾಸಕ ಶಿವರಾಂ, ಎನ್.ಆರ್.ಜಯಲಕ್ಷ್ಮೀ, ಸತ್ಯಾ ಅನ್ವೇಷಣ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net