

ಸೊರಬ: ಯಡಗೊಪ್ಪ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 22 ವರ್ಷ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸಿ ವರ್ಗಾವಣೆಗೊಂಡ ಜಿ.ಲಲಿತಮ್ಮ ಅವರಿಗೆ ಶಾಲೆ ಹಾಗೂ ಗ್ರಾಮದ ಹಳೆಯ ವಿದ್ಯಾರ್ಥಿಗಳಿಂದ ಸನ್ಮಾನಿಸಿ ಬೀಳ್ಕೊಡಲಾಯಿತು.
ಜಿ.ಲಲಿತಮ್ಮ ಮಾತನಾಡಿ, ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಬೆಳೆಯಬೇಕು. ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂಬುದು ಪ್ರತಿಯೊಬ್ಬ ಶಿಕ್ಷಕರ ಆಶಯ ಎಂದು ತಿಳಿಸಿದರು.
ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ವೈ.ಬಿ.ತಿಮ್ಮಪ್ಪ, ಉಪಾಧ್ಯಕ್ಷೆ ಕೋಮಲಾ, ಗ್ರಾಪಂ ಸದಸ್ಯ ಸೀತಾರಾಮ, ಮುಖ್ಯಶಿಕ್ಷಕ ಬಿ.ತಿಮ್ಮೇಶ್ ಆಚಾರ್ಯ, ಶಿಕ್ಷಕಿ ಮಂಗಲಾ, ಹಳೆಯ ವಿದ್ಯಾರ್ಥಿಗಳು, ಶಾಲಾಭಿವೃದ್ಧಿ ಸಮಿತಿ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.