ವಿದ್ಯಾರ್ಥಿ ನಿಗೂಢ ನಾಪತ್ತೆ: ಹೈಕೋರ್ಟ್ ಕದ ತಟ್ಟಿದ ಹೆತ್ತವರು

highcourt
Published on

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪರಂಗಿಪೇಟೆಯ ವಿದ್ಯಾರ್ಥಿ ದಿಗಂತ್ ನಾಪತ್ತೆ ವಿಚಾರವಾಗಿ ತಮ್ಮ ಮಗನನ್ನು ಹುಡುಕಿ ಕೊಡುವಂತೆ ಅವರ ಪಾಲಕರು ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದಾರೆ.

ಈ ಅರ್ಜಿ ವಿಚಾರಣೆ ನಡೆಸಿದ ವಿ. ಕಾಮೇಶ್ವರ್ ರಾವ್ ಅವರ ನೇತೃತ್ವದ ವಿಭಾಗೀಯ ಪೀಠ ಅರ್ಜಿ ವಿಚಾರವಾಗಿ ತನಿಖೆ ನಡೆಸಿ ಮಾ. 12ರೊಳಗೆ ವರದಿ ಸಲ್ಲಿಸುವಂತೆ ಪೊಲಿಸರಿಗೆ ಸೂಚಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪರಂಗಿಪೇಟೆಯ ವಿದ್ಯಾರ್ಥಿ ದಿಗಂತ್ ಫೆ. 25ರಿಂದ ನಾಪತ್ತೆಯಾಗಿದ್ದ. ಹಲವು ದಿನಗಳ ಹುಡಕಾಟದ ನಂತರವೂ ಆತನ ಬಗ್ಗೆ ಏನು ಸುಳಿವು ಸಿಗದ ಹಿನ್ನೆಲೆ ಪಾಲಕರು ಹೈಕೋರ್ಟ್ ಕದ ತಟ್ಟಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net