ಸಂಗೊಳ್ಳಿ ‌ರಾಯಣ್ಣ ಸೈನಿಕ ಶಾಲೆ: ಪನೀರ್, ಚಿಕನ್ ಊಟ ಸೇವಿಸಿ 38 ವಿದ್ಯಾರ್ಥಿಗಳು ತೀವ್ರ ಅಸ್ವಸ್ಥ

belgavi
Published on

ಬೆಳಗಾವಿ: 38 ವಿದ್ಯಾರ್ಥಿಗಳು ವಸತಿ ಶಾಲೆಯಲ್ಲಿ ಮಾಡಿದ್ದ ಆಹಾರ ಸೇವಿಸಿ ತೀವ್ರ ಅಸ್ವಸ್ಥರಾದ ಘಟನೆ ಬೈಲಹೊಂಗಲ ತಾಲೂಕಿನ ಸಂಗೊಳ್ಳಿ ಗ್ರಾಮದಲ್ಲಿರುವ ಸಂಗೊಳ್ಳಿ ‌ರಾಯಣ್ಣ ಸೈನಿಕ ಶಾಲೆಯಲ್ಲಿ ನಡೆದಿದೆ.

ಆಹಾರ ಸೇವಿಸಿದ ವಿದ್ಯಾರ್ಥಿಗಳು ವಾಂತಿ-ಬೇಧಿಯಿಂದ ಬಳಲುತ್ತಿದ್ದರು. ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿಗಳಿಗೆ ಸಂಗೊಳ್ಳಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಸ್ಥಳಕ್ಕೆ ಬೈಲಹೊಂಗಲ ಎಸಿ ಪ್ರಭಾವತಿ ಫಕೀರಪುರ, ತಹಶಿಲ್ದಾರ ಜೆ.ಸಿ ಅಷ್ಠಗಿಮಠ ಭೇಟಿ ನೀಡಿದ್ದು, ಶಾಲೆಯ ಊಟದ ವ್ಯವಸ್ಥಾಪಕರು, ಪ್ರಾಚಾರ್ಯರನ್ನು ಎಸಿ ಪ್ರಭಾವತಿ ಅವರು ತರಾಟೆಗೆ ತೆಗೆದುಕೊಂಡಿದ್ದಾರೆ. ವಿದ್ಯಾರ್ಥಿಗಳು ಗುರುವಾರ ರಾತ್ರಿ ಪನ್ನೀರ್ ಹಾಗೂ ಚಿಕನ್ ಊಟ ಸೇವಿಸಿದ್ದರು ಎನ್ನಲಾಗಿದೆ.

ಏಳು ವಿದ್ಯಾರ್ಥಿಗಳು ಅಸ್ವಸ್ಥ
ಗುಂಡ್ಲುಪೇಟೆ ತಾಲೂಕಿನ ಗರಗನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಏಳು ವಿದ್ಯಾರ್ಥಿಗಳು ಸಹ ಆಹಾರ ಸೇವಿಸಿ ಅಸ್ವಸ್ಥರಾದ ಘಟನೆ ಗುರುವಾರ ನಡೆದಿದೆ. ಬೆಳಗ್ಗೆ ಟಮೆಟೊ ಬಾತ್ ಮಾಡಲಾಗಿತ್ತು. ಅದು ಹೆಚ್ಚು ಖಾರವಾಗಿದ್ದು, ಇದನ್ನು ಸೇವಿಸಿದ ವಿದ್ಯಾರ್ಥಿಗಳಿಗೆ ಹೊಟ್ಟೆನೋವು, ವಾಂತಿ ಕಾಣಿಸಿಕೊಂಡಿದೆ. ವಿದ್ಯಾರ್ಥಿಗಳನ್ನು ಕೂಡಲೇ ಸಮೀಪದ ಹೊರೆಯಾಲ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗಿದೆ.

ಈ ಹಿಂದೆಯೂ ಹಾಸ್ಟೆಲ್​​​​​​ನಲ್ಲಿ ಮಾಡಿದ್ದ ಚಿಕನ್ ಸಾಂಬಾರ್ ಊಟ ಸೇವಿಸಿ ಮಕ್ಕಳು ಅಸ್ವಸ್ಥರಾಗಿದ್ದ ಘಟನೆ ಗುಂಡ್ಲುಪೇಟೆ ತಾಲೂಕಿನ ಬೇಗೂರಿನಲ್ಲಿ ನಡೆದಿತ್ತು. ಬೇಗೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಮಕ್ಕಳು ಹಾಸ್ಟೆಲ್‌ ನಲ್ಲಿ ಮಾಡಿದ್ದ ಚಿಕನ್ ಸಾಂಬಾರ್ ಊಟ ಮಾಡಿದ ನಂತರ ಅಸ್ವಸ್ಥರಾಗಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net