ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ವಿಧಿಸಿದ್ದ ಗಡುವು ವಿಸ್ತರಣೆ; ಜೂನ್ 20ರ ವರೆಗೂ ಅವಕಾಶ..

feature Scholor
Published on

ಬೆಂಗಳೂರು: ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ನಿಗದಿ ಪಡಿಸಿದ್ದ ಕೊನೆಯ ದಿನವನ್ನು ಜೂನ್ ೨೦ರವರೆಗೆ ವಿಸ್ತರಿಸಲಾಗಿದೆ. ವಿದ್ಯಾರ್ಥಿಗಳು ಪಡುತ್ತಿರುವ ಕಷ್ಟದ ಕುರಿತು 'ಸ್ಕಾಲರ್‌ಶಿಪ್ ಅರ್ಜಿ ಸಲ್ಲಿಕೆ ಪರದಾಟ' ಎಂಬ ಶೀರ್ಷಿಕೆಯಡಿ ವಿಜಯವಾಣಿ ಮೇ 31ರಂದು ವಿಶೇಷ ವರದಿ ಪ್ರಕಟಿಸಿತ್ತು.

ಈಗ ಈ ಸಮಸ್ಯೆಗೆ ಪರಿಹಾರ ಕಲ್ಪಿಸಿರುವ ಸಮಾಜ ಕಲ್ಯಾಣ ಇಲಾಖೆ, ಅರ್ಜಿ ಸಲ್ಲಿಸಲು ಇದ್ದ ತಾಂತ್ರಿಕ ಸಮಸ್ಯೆಯನ್ನು ಸರಿ ಪಡಿಸಿ ಅರ್ಜಿ ಸಲ್ಲಿಕೆಗೆ ನಿಗದಿ ಪಡಿಸಿದ್ದ ಕೊನೆಯ ದಿನಾಂಕವನ್ನು ಮೇ 31ರಿಂದ ಜೂ 20ರವರೆಗೆ ವಿಸ್ತರಿಸಿದೆ. ಇದಕ್ಕೆ ವಿದ್ಯಾರ್ಥಿಗಳು 'ವಿಜಯವಾಣಿ'ಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net