

ನವದೆಹಲಿ: ಬಿಹಾರ ಚುನಾವಣೆ ಸಮೀಪಿಸುತ್ತಿದ್ದಂತೆ ಕೆಲವು ಮಹತ್ವದ ಬೆಳವಣಿಗೆಗಳು ಆಗುತ್ತಿವೆ. ಇದೀಗ ಲೋಕತಾಂತ್ರಿಕ್ ಜನತಾದಳ್ ಮುಖ್ಯಸ್ಥ ಶರದ್ ಯಾದವ್ ಅವರ ಪುತ್ರಿ ಸುಭಾಷಿಣಿ ರಾಜಾ ರಾವ್ ಅವರು ಇಂದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
ಸುಭಾಷಿಣಿಯೊಂದಿಗೆ ಲೋಕ ಜನಶಕ್ತಿ ಪಾರ್ಟಿ (ಎಲ್ಜೆಪಿ)ಯ ಮುಖಂಡ, ಎಂಪಿ ಕಾಳಿ ಪಾಂಡೆ ಕೂಡ ಕಾಂಗ್ರೆಸ್ ಸೇರಿದ್ದಾರೆ.
ಇವರಿಬ್ಬರೂ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ನಿಂದ ಸ್ಪರ್ಧಿಸಲಿದ್ದಾರೆ ಎನ್ನಲಾಗಿದೆ. ಸುಭಾಷಿಣಿಯವರು ಸಾಮಾಜಿಕ ಕಾರ್ಯಕರ್ತೆ. ಕಾಂಗ್ರೆಸ್ ಸೇರ್ಪಡೆಯ ಬಳಿಕ ಮಾತನಾಡಿದ ಅವರು, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದಿದ್ದಾರೆ. (ಏಜೆನ್ಸೀಸ್)