-ವಾಲ್ಮೀಕಿ ಹಗರಣದಲ್ಲಿ ಹೈಕೋರ್ಟ್‌ಗೆ 3ನೇ ತನಿಖಾ ವರದಿ ಸಲ್ಲಿಸಿದ ಸಿಬಿಐ

highcourt
Published on

ಬೆಂಗಳೂರು: ವಾಲ್ಮೀಕಿ ಹಗರಣದ ಹಣ ದುರ್ಬಳಕೆ ಆರೋಪಕ್ಕೆ ಸಂಬಂಧಿಸಿದಂತೆ ಯೂನಿಯನ್ ಬ್ಯಾಂಕ್ ಆ್ ಇಂಡಿಯಾ ಅಧಿಕಾರಿಗಳ ವಿರುದ್ಧ ತನಿಖೆ ಆರಂಭಿಸಿರುವ ಕೇಂದ್ರೀಯ ತನಿಖಾ ದಳವು (ಸಿಬಿಐ) ತನಿಖೆಗೆ ಸಂಬಂಧಿಸಿದಂತೆ ಮೂರನೇ ವಸ್ತುಸ್ಥಿತಿ ವರದಿ ಸಲ್ಲಿಸಿದ್ದು, ಅಗತ್ಯ ನಿರ್ದೇಶನಗಳನ್ನು ನೀಡಲಾಗುವುದು ಎಂದು ಹೈಕೋರ್ಟ್ ತಿಳಿಸಿದೆ.

ಬಿಜೆಪಿ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಮತ್ತಿತರರು ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು. ಸಿಬಿಐ ಪ್ರತಿನಿಧಿಸಿದ್ದ ವಿಶೇಷ ಸರ್ಕಾರಿ ಅಭಿಯೋಜಕ ಪಿ. ಪ್ರಸನ್ನ ಕುಮಾರ್ ಪ್ರಕರಣದ ಕುರಿತಾಗಿ ತನಿಖೆಗೆ ಸಂಬಂಧಿಸಿದ ಮೂರನೇ ವಸ್ತುಸ್ಥಿತಿ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ.

ಈ ಬಗ್ಗೆ ಪರಿಶೀಲಿಸಿ ನ್ಯಾಯಾಲಯವು ಕೆಲವು ನಿರ್ದೇಶನಗಳನ್ನು ನೀಡಬೇಕು ಎಂದು ಮನವಿ ಮಾಡಿದರು. ಇದಕ್ಕೆ ಸಮ್ಮತಿ ಸೂಚಿಸಿದ ಹೈಕೋರ್ಟ್ ಸೂಕ್ತ ನಿರ್ದೇಶನ ಕೊಡುವುದಾಗಿ ತಿಳಿಸಿ ವಿಚಾರಣೆಯನ್ನು ಮುಂದೂಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net