

ಬೆಂಗಳೂರು: ( Kichcha Sudeepa Care Foundation ) ಸ್ಯಾಂಡಲ್ವುಡ್ ನಟ ಕಿಚ್ಚ ಸುದೀಪ್ ಅಭಿನಯದ 'ಮ್ಯಾಕ್ಸ್' ಸಿನಿಮಾ ಭರ್ಜರಿ ಯಶಸ್ಸು ಕಂಡಿತ್ತು. ವಿಶ್ವಾದ್ಯಂತ ಬಾಕ್ಸ್ ಆಫೀಸ್‌ನಲ್ಲಿ ಚಿತ್ರ ಉತ್ತಮ ಪ್ರದರ್ಶನ ಕಾಣುತ್ತಿದೆ. ಇತ್ತ 'ಕಿಚ್ಚ ಸುದೀಪ್ ಚಾರಿಟಬಲ್ ಸೊಸೈಟಿ' ಮೂಲಕವಾಗಿ ಸಮಾಜ ಸೇವೆ ಮಾಡಲು ಮತ್ತೊಂದು ಹೆಜ್ಜೆ ಮುಂದಿಟ್ಟಿದ್ದಾರೆ.
'ಕಿಚ್ಚ ಸುದೀಪ್ ಚಾರಿಟಬಲ್ ಸೊಸೈಟಿ' ಅಂಗವಾಗಿ ಶಾಲೆಗಳನ್ನು ದತ್ತು ಪಡೆದು ಅಭಿವೃದ್ಧಿ ಪಡಿಸಲು ಶ್ರಮಿಸಲಾಗುತ್ತಿದೆ. ಬಡ ಮಕ್ಕಳಿಗೆ ವಿದ್ಯಾರ್ಥಿ ವೇತನವನ್ನೂ ನೀಡುತ್ತಿದ್ದಾರೆ.
ಕೋವಿಡ್ ಸಮಯದಲ್ಲಿ ತೊಂದರೆಯಲ್ಲಿದ್ದ ಕನ್ನಡದ ಹಿರಿಯ ಕಲಾವಿದರು ಮತ್ತು ತಂತ್ರಜ್ಞರಿಗೆ ಅವರು ದಿನಸಿಗಳನ್ನು ಒದಗಿಸಿದರು. ಇದೀಗ 'ಕಿಚ್ಚ ಸುದೀಪ್ ಕೇರ್ ಫೌಂಡೇಶನ್' ಮೂಲಕ ಸುದೀಪ್ ಮತ್ತೊಂದು ಹೆಜ್ಜೆ ಮುಂದಿಟ್ಟಿದ್ದಾರೆ.
ಇದೀಗ 'ಕಿಚ್ಚ ಸುದೀಪ್ ಕೇರ್ ಫೌಂಡೇಶನ್' ಮೂಲಕ ಸುದೀಪ್ ಮತ್ತೊಂದು ಹೆಜ್ಜೆ ಮುಂದಿಟ್ಟಿದ್ದಾರೆ. ಅಗತ್ಯವಿರುವವರಿಗೆ ಶಿಕ್ಷಣ ಮತ್ತು ವೈದ್ಯಕೀಯ ಸೇವೆಗಳನ್ನು ಒದಗಿಸುವುದು ಇದರ ಮುಖ್ಯ ಉದ್ದೇಶವಾಗಿದೆ. ಹಾಗಾಗಿ ಈ ಸ್ಟಾರ್ ಹೀರೋ ಇನ್ನಷ್ಟು ಸಾಮಾಜಿಕ ಚಟುವಟಿಕೆಗಳಲ್ಲಿ ಭಾಗವಹಿಸಲು ನಿರ್ಧರಿಸಿದ್ದಾರೆ.