ಮಾಸ್ಕ್​ ಕಡ್ಡಾಯ: ಸಿಎಂ ನೇತೃತ್ವದ ಸಭೆ ಬಳಿಕ ಹೊಸ ಮಾರ್ಗಸೂಚಿ ಬಗ್ಗೆ ವಿವರಿಸಿದ ಸುಧಾಕರ್​

corona
Published on

ಬೆಳಗಾವಿ: ಚೀನಾ ಸೇರಿ ಹೊರ ದೇಶಗಳಲ್ಲಿ ಕೋವಿಡ್​ ಸೋಂಕಿತರ ಸಂಖ್ಯೆ ಹೆಚ್ಚಳ ಹಾಗೂ ಹೊಸ ವರ್ಷಕ್ಕೆ ಜನಸಂದಣಿ ಉಂಟಾಗುವ ಹಿನ್ನೆಲೆಯಲ್ಲಿ ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಸಿಎಂ ನೇತೃತ್ವದಲ್ಲಿ ಗುರುವಾರ ಮಹತ್ವದ ಸಭೆ ನಡೆಯಿತು. ಮುಂಜಾಗ್ರತಾ ಕ್ರಮವಾಗಿ ಸಭೆಯಲ್ಲಿ ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದ್ದು, ಈ ಕುರಿತು ಆರೋಗ್ಯ ಸಚಿವ ಡಾ.ಕೆ.ಸುಧಾಕರ್​ ಮಾಹಿತಿ ನೀಡಿದ್ದಾರೆ.

ವಿದೇಶದಿಂದ ಬರುವವರ ಮೇಲೆ ನಿಗಾವಹಿಸಲಾಗುವುದು. ಎಸಿ ಬಳಸುವ ಜಾಗಗಳಲ್ಲಿ ಕಡ್ಡಾಯವಾಗಿ ಮಾಸ್ಕ್​ ಧರಿಸಬೇಕು. ಏರ್ಪೋಟ್​ನಲ್ಲಿ ಪ್ರಯಾಣಿಕರಿಗೆ ರ್ಯಾಂಡಮ್​ ಟಸ್ಟಿಂಗ್​ ಕಡ್ಡಾಯ. ಐಎಲ್​ಐ ಮತ್ತು ಸಾರಿ ಇರುವ ಪ್ರಕರಣಗಳನ್ನು ಕಡ್ಡಾಯವಾಗಿ ಟೆಸ್ಟಿಂಗ್​ಗೆ ಒಳಪಡಿಸಲಾಗುವುದು. ಕೋವಿಡ್​ ಲಸಿಕೆಯನ್ನು ಯಾರೆಲ್ಲಾ ತೆಗೆದುಕೊಂಡಿಲ್ಲ ಅವರಿಗೆ ತೆಗೆದುಕೊಳ್ಳುವಂತೆ ಜಾಗೃತಿ ಮೂಡಿಸಲಾಗುವುದು. ಕರೊನಾ ನಿಯಂತ್ರಣಕ್ಕೆ ಜನರು ಸಹಕಾರ ಕೊಡಬೇಕು ಎಂದು ಸುಧಾಕರ್ ಮನವಿ ಮಾಡಿದರು.

ಕರೊನಾ ಕೇಸ್​ಗಳು ಗಣನೀಯವಾಗಿ ಕುಸಿತವಾದ ಹಿನ್ನೆಲೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್​ ಬಳಸುವುದನ್ನು ನಿಲ್ಲಿಸಲಾಗಿತ್ತು. ಆದರೆ ನೆರೆಯ ಚೀನಾದಲ್ಲಿ ದೈನಂದಿನ ಕರೊನಾ ಕೇಸ್​ಗಳು ಹೆಚ್ಚಾಗಿವೆ. ಇದರ ಬೆನ್ನಲ್ಲೇ ದೇಶದಲ್ಲೂ ಆತಂಕ ಶುರುವಾಗಿದೆ. ಸೋಂಕು ಹರಡುವಿಕೆ ನಿಯಂತ್ರಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೂ ವರ್ಚುವಲ್​ ಮೀಟಿಂಗ್​ ನಡೆಸುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net