ಕಬ್ಬಿಗೆ ಬೆಂಕಿ; ಶಾರ್ಟ್​ ಸರ್ಕ್ಯೂಟ್​ ಅವಾಂತರದಿಂದ ಬಡ ರೈತ ಹೈರಾಣ…

sugarcabe burn
Published on

ಬೀದರ್​: ಶಾರ್ಟ್ ಸರ್ಕ್ಯೂಟ್‌ನಿಂದ ಬಡ ರೈತನ ಕಬ್ಬು ಸುಟ್ಟು ಭಸ್ಮವಾಗಿದೆ.

ಅತಿವೃಷ್ಟಿ ಅನಾವೃಷ್ಟಿಯಿಂದ ಹೈರಾಣಾಗಿ ಹೋಗಿದ್ದ ಬಡ ರೈತ ಸಾಲ ಮಾಡಿ ಬೆಳೆದ ಕಬ್ಬು ಇದೀಗ ವಿದ್ಯುತ ಶಾರ್ಟ್ ಸರ್ಕ್ಯೂಟ್‌ನಿಂದ ಗದ್ದೆಯಲ್ಲಿ ಬೆಳೆದ ಕಬ್ಬು ಸುಟ್ಟು ಭಸ್ಮವಾದ ಘಟನೆ ಬೀದರ್ ತಾಲೂಕಿನ ಮೊಗದಾಳ ಗ್ರಾಮದಲ್ಲಿ ನಡೆದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೊಗದಾಳ ಗ್ರಾಮದ ರೈತ ಚಂದ್ರಶೆಟ್ಟಿ ಅವರ ಕಬ್ಬು ಬೆಳೆ ನಾಶದಿಂದ ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎಂಬಂತಾಗಿದೆ. ಹೀಗಾಗಿ ಬಡ ರೈತ ಕಂಗಾಲಾಗಿ ಹೋಗಿದ್ದಾರೆ.

ಒಂದು ಎಕರೆ ಪ್ರದೇಶದಲ್ಲಿ ಹುಲುಸಾಗಿ ಬೆಳೆದ ಕಬ್ಬು ಇನ್ನೇನು ಕಾರ್ಖಾನೆಗೆ ಸರಬರಾಜು ಮಾಡುವ ವ್ಯವಸ್ಥೆ ಮಾಡುತಿದ್ದ ರೈತನ ಬದುಕಿನಲ್ಲಿ ಕತ್ತಲೆ ಆವರಿಸಿದೆ. ಇಷ್ಟಾದರೂ ಜೆಸ್ಕಾಂ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳದ ಕಾರಣ ಗ್ರಾಮದ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ...

ವಿದ್ಯುತ್ ಸರಬರಾಜು ಕಂಪೆನಿ ಅಧಿಕಾರಿಗಳು ಮತ್ತು ತಹಶೀಲ್ದಾರ್ ಸ್ಥಳಕ್ಕೆ ಆಗಮಿಸಿದ್ದ ಸಂದರ್ಭ ಬೆಳೆ ನಾಶದ ಪರಿಹಾರ ಒದಗಿಸಬೇಕೆಂದು ರೈತ ಚಂದ್ರಶೆಟ್ಟಿ ಮನವಿ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net