ಕಬ್ಬಿನ ಬಾಕಿ ಬಿಲ್ ಪಾವತಿ ಮತ್ತು ದರ ಏರಿಕೆ ಹೋರಾಟ : 30ಕ್ಕೂ ಹೆಚ್ಚು ಟ್ರ್ಯಾಕ್ಟರ್​ಗಳಿಗೆ ಬೆಂಕಿ ಹಚ್ಚಿ ರೈತರ ಆಕ್ರೋಶ| Sugar cane

ವಿಜಯವಾಣಿ - 2025-11-13T191300.631
Published on

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯಲ್ಲಿ ಕಬ್ಬಿನ(Sugar cane) ಬಾಕಿ ಬಿಲ್ ಪಾವತಿ ಮತ್ತು ದರ ಏರಿಕೆ ಸಂಬಂಧಿಸಿದಂತೆ ಕಬ್ಬು ಬೆಳೆಗಾರರ ಹೋರಾಟ ತೀವ್ರವಾಗಿದ್ದು, ಇಂದು(ನ. 13) ಸಂಜೆ ಮುಧೋಳ ತಾಲೂಕಿನ ಸೈದಾರಪುರ ಗೋದಾವರಿ ಸಕ್ಕರೆ ಕಾರ್ಖಾನೆಯಲ್ಲಿ ಕಬ್ಬು ತುಂಬಿಕೊಂಡು ನಿಂತಿದ್ದ 30ಕ್ಕೂ ಹೆಚ್ಚು ಟ್ರ್ಯಾಕ್ಟರ್​ಗಳಿಗೆ ಬೆಂಕಿ ಹಚ್ಚಿ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜಿಲ್ಲೆಯಲ್ಲಿರುವ 13 ಸಕ್ಕರೆ ಕಾರ್ಖಾನೆಗಳು ಉಳಿಸಿಕೊಂಡಿರುವ ಬಾಕಿ ಬಿಲ್ ಪಾವತಿ, ಪ್ರತಿ ಟನ್ ಕಬ್ಬಿಗೆ​ 3,500 ರೂ. ನೀಡುವಂತೆ ಒತ್ತಾಯಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಬೇಡಿಕೆಯ ಬಗ್ಗೆ ಜಿಲ್ಲಾಡಳಿತ ಮತ್ತು ಕಾರ್ಖಾನೆ ಮಾಲೀಕರಿಂದ ಯಾವುದೇ ಸ್ಪಂದನೆ ದೊರೆಯದ ಹಿನ್ನೆಲೆ ಕಬ್ಬು ತುಂಬಿದ್ದ ಟ್ರ್ಯಾಕ್ಟರ್​ಗಳಿಗೆ ಬೆಂಕಿ ಹಚ್ಚಿದ್ದಾರೆ.

ಸ್ಥಳದಲ್ಲಿ 30ಕ್ಕೂ ಹೆಚ್ಚು ಟ್ರ್ಯಾಕ್ಟರ್ ಇಂಜಿನ್, 100ಕ್ಕೂ ಹೆಚ್ಚು ಟ್ರಾಲಿಗಳು ಬೆಂಕಿಗಾಹುತಿಯಾಗಿವೆ. ಅಗ್ನಿಶಾಮಕದಳದ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ. ಇನ್ನೂ ಕಬ್ಬಿನ ಜೊತೆ ಟ್ರ್ಯಾಕ್ಟರ್ ಕಳೆದುಕೊಂಡ ಕೆಲ ಬಡ ರೈತರು ಸ್ಥಳದಲ್ಲಿ ಕಣ್ಣೀರು ಹಾಕುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net