ರೂಪಾ-ರೋಹಿಣಿಗೆ ರಾಜೀಗೆ ಸಲಹೆ

Roopa Sindhuri
Published on

ಬೆಂಗಳೂರು: ಹಿರಿಯ ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್ ವಿರುದ್ಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರು ದಾಖಲಿಸಿದ್ದ ಮಾನನಷ್ಟ ಮೊಕದಮೆ ಸಂಬಂಧ 5ನೇ ಎಸಿಎಂಎಂ ಕೋರ್ಟ್‌ನಲ್ಲಿ ಬುಧವಾರ ಸಾಕ್ಷ್ಯ ವಿಚಾರಣೆ ನಡೆಯಿತು.

ಕೋರ್ಟ್‌ಗೆ ರೋಹಿಣಿ ಸಿಂಧೂರಿ ಮತ್ತು ರೂಪಾ ಮೌದ್ಗಿಲ್ ಅವರು ತಮ್ಮ ಪತಿಯೊಂದಿಗೆ ಹಾಜರಾಗಿದ್ದರು. ಇಬ್ಬರೂ ಉತ್ತಮ ಹೆಸರು ಗಳಿಸಿದ ಹಿರಿಯ ಮಹಿಳಾ ಅಧಿಕಾರಿ ಆಗಿದ್ದೀರಿ. ನಿಮ್ಮ ಸಮಯ ಸಮಾಜಕ್ಕಾಗಿ ಮೀಸಲಿಡಬೇಕು. ಕೋರ್ಟ್ ಕಲಾಪದಲ್ಲಿ ಸಮಯ ವ್ಯಯಿಸುವ ಬದಲು ರಾಜಿ ಸಾಧ್ಯವೇ ಯೋಚಿಸಿ ಎಂದು ನ್ಯಾಯಾಧೀಶ ವಿಜಯ್ ಕುಮಾರ್ ಜಾಟ್ಲಾ ಕಿವಿಮಾತು ಹೇಳಿದರು. ಅಲ್ಲದೇ, ಇಬ್ಬರೂ ಅಧಿಕಾರಿಗಳಿಗೆ ಒನ್ ಮಿನಿಟ್ ಅಪಾಲಜಿ ಪುಸ್ತಕ ಓದುವಂತೆ ಸಲಹೆ ನೀಡಿ ಮುಂದಿನ ವಿಚಾರಣೆಯನ್ನು ಫೆ.12ಕ್ಕೆ ಮುಂದೂಡಿದರು.

ಸಾಮಾಜಿಕ ಜಾಲತಾಣದಲ್ಲಿ ಐಪಿಎಸ್ ಅಧಿಕಾರಿ ಡಿ.ರೂಪಾ ಅವರು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರು ಫೋಟೋಗಳನ್ನು ಹಂಚಿಕೊಂಡಿದ್ದರು. ಇದರ ವಿರುದ್ಧ ಅಸಮಧಾನ ವ್ಯಕ್ತಪಡಿಸಿ ರೋಹಿಣಿ ಸಿಂಧೂರಿ ಅವರು, ರೂಪಾ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದರು. ಇದನ್ನು ಪ್ರಶ್ನಿಸಿ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ವರೆಗೂ ಮೆಟ್ಟಿಲೇರಿತ್ತು.

ಕೊನೆಗೆ ಸುಪ್ರೀಂಕೋರ್ಟ್‌ನಲ್ಲೂ ಈ ಇಬ್ಬರೂ ಅಧಿಕಾರಿಗಳ ಜಗಳ ಬಗೆಹರಿಯಲಿಲ್ಲ. ನ್ಯಾಯಾಧೀಶರ ಮನವಿಗೂ ಅಧಿಕಾರಿಗಳು ಬಗ್ಗಲಿಲ್ಲ. ಆದ್ದರಿಂದ ಸುಪ್ರೀಂಕೋರ್ಟ್, ಸೂಚನೆ ಮೇರೆಗೆ ವಿಚಾರಣಾಧೀನಾ ನ್ಯಾಯಾಲಯದಲ್ಲಿ ವಿಚಾರಣೆ ಮುಂದುವರಿದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net