ಸುಹಾಸ್​ ಶೆಟ್ಟಿ ಹತ್ಯೆ ಪ್ರಕರಣ; ಪ್ರಮುಖ ಆರೋಪಿ ಸೇರಿದಂತೆ 8 ಮಂದಿ ಬಂಧನ

ವಿಜಯವಾಣಿ - 2025-05-03T133040.471
Published on

Mangaluru: ಪ್ರವೀಣ್ ನೆಟ್ಟಾರು ಹತ್ಯೆ ನಂತರ ಮತ್ತೆ ಮಂಗಳೂರಿನಲ್ಲಿ ನೆತ್ತರು ಹರಿದಿದ್ದು, ಹಿಂದೂಪರ ಕಾರ್ಯಕರ್ತ ಸುಹಾಸ್​ ಶೆಟ್ಟಿಯನ್ನು ಕಿಡಿಗೇಡಿಗಳ ಗ್ಯಾಂಗ್​ ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಚ್ಚಿ ಕೊಲೆಗೈದಿದೆ. ಮಂಗಳೂರಿನ ಬಜ್ಪೆ ಕಿನ್ನಿಪದವು ಸಮೀಪ ಸುಹಾಸ್ ಶೆಟ್ಟಿ ಮೇಲೆ ಏಕಾಏಕಿ ದಾಳಿ ನಡೆಸಿ, ಮಚ್ಚಿನಿಂದ ಕೊಲೆ ಮಾಡಲಾಗಿದೆ. ಈ ಘಟನೆ ಸಂಭವಿಸಿದ ಬೆನ್ನಲ್ಲೇ ದಕ್ಷಿಣ ಕನ್ನಡದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಬಿಗಿ ಬಂದೋಬಸ್ತ್​ ಮಾಡಲಾಗಿದೆ.

ದಕ್ಷಿಣ ಕನ್ನಡದಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಹಿನ್ನೆಲೆ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರು ಮಾತನಾಡಿ, "ಭಾರತೀಯ ನಾಗರಿಕ ಸುರಕ್ಷಾ ಸಂಹಿತ (ಬಿಎನ್‌ಎಸ್) ಸೆಕ್ಷನ್ 163ರ ಅಡಿಯಲ್ಲಿ ನಿಷೇಧಾಜ್ಞೆಗಳನ್ನು ವಿಧಿಸಲಾಗಿದೆ. ಸಾರ್ವಜನಿಕ ಸಭೆಗಳು, ಮೆರವಣಿಗೆಗಳು ಮತ್ತು ಪ್ರಚೋದನಕಾರಿ ವಿಷಯಗಳನ್ನು ನಿಷೇಧಿಸುವ ಈ ಆದೇಶಗಳು ಮೇ 6ರವರೆಗೆ ಜಾರಿಯಲ್ಲಿರುತ್ತವೆ" ಎಂದು ಸ್ಪಷ್ಟವಾಗಿ ತಿಳಿಸಿದ್ದಾರೆ.

ಸುಹಾಸ್ ಶೆಟ್ಟಿ ಬರ್ಬರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರು ಒಟ್ಟು 8 ಆರೋಪಿಗಳನ್ನು ಬಂಧಿಸಿದ್ದಾರೆ. 5 ತಂಡಗಳನ್ನು ರಚಿಸಿ ಆರೋಪಿಗಳ ಸೆರೆಗೆ ಬಲೆ ಬೀಸಿದ್ದ ಖಾಕಿ ಪಡೆ, 8 ಶಂಕಿತ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

ಬಂಧಿತರ ಹೆಸರು

1. ಅಬ್ದುಲ್ ಸಫ್ವಾನ್

2. ನಿಯಾಜ್

3. ಎಂಡಿ ಮುಜಾಮಿಲ್

4. ಕಲಂದರ್ ಶಫಿ

5. ಆದಿಲ್ ಮೆಹರೂಫ್

6. ನಾಗರಾಜ್

7. ಎಂಡಿ ರಿಜ್ವಾನ್

8. ರಂಜಿತ್

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net