ಸುಹಾಸ್ ಶೆಟ್ಟಿ ಹತ್ಯೆ ಕೇಸ್​; ಪ್ರಕರಣ NIA ಗೆ ಹಸ್ತಾಂತರಿಸಲು ಬಿ.ವೈ.ವಿಜಯೇಂದ್ರ ಆಗ್ರಹ

dk - 2025-05-02T203213.957
Published on

NIA : ಹಿಂದು ಕಾರ್ಯಕರ್ತ ಸುಹಾಸ್ ಅವರ ಬರ್ಬರ ಹತ್ಯೆಗೆ ಇಡೀ ರಾಜ್ಯದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ. ಕಾಶ್ಮೀರದಲ್ಲಿ ಹಿಂದೂಗಳ ಹತ್ಯೆಯ ದುರ್ಘಟನೆ ಮರೆಯುವ ಮುನ್ನವೇ ನಡೆದಿರುವುದು ಖಂಡನೀಯ. ಪೊಲೀಸ್ ಇಲಾಖೆಯ ವೈಫಲ್ಯ ಎದ್ದು ಕಾಣುತ್ತಿದೆ ಎಂದು ಬಿಜೆಪಿ ರಾಜ್ಯಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದರು, ರಾಜ್ಯದ ಜನತೆಗೆ, ಹಿಂದೂ ಸಂಘಟನೆಗಳು ಹಾಗೂ ಕಾರ್ಯಕರ್ತರಿಗೆ ಈ ಸರ್ಕಾರದ ಮೇಲೆ ಸಂಪೂರ್ಣ ವಿಶ್ವಾಸವಿಲ್ಲದಂತಾಗಿದೆ ಎಂದರು.

ಭಾರತೀಯ ಜನತಾ ಪಾರ್ಟಿಯ ನಮ್ಮೆಲ್ಲ ನಾಯಕರು ಹಿಂದು ಕಾರ್ಯಕರ್ತ ಸುಹಾಸ್ ಅವರ ಅಂತ್ಯ ಸಂಸ್ಕಾರದಲ್ಲಿ ಭಾಗವಹಿಸಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ಆ ಕುಟುಂಬದ ಜೊತೆ ನಾವಿದ್ದೇವೆ ಎಂಬ ಅಭಯ ತುಂಬಿ ರಾಜ್ಯ ಬಿಜೆಪಿ ವತಿಯಿಂದ ಆರ್ಥಿಕ ಸಹಾಯ ಮಾಡಿದ್ದೇವೆ. ರಾಜ್ಯ ಸರ್ಕಾರ ಈ ರೀತಿಯ ಘಟನೆ ನಡೆದಾಗ ಎಂದೂ ನಮ್ಮ ಕಾರ್ಯಕರ್ತರ ಪರ ನಿಂತಿಲ್ಲ. ಈ ಸರ್ಕಾರಕ್ಕೆ ಮನುಷ್ಯತ್ವವಿದ್ದರೆ ಆ ಕುಟುಂಬಕ್ಕೆ ಪರಿಹಾರ ಘೋಷಿಸಿ, ರಾಷ್ಟ್ರೀಯ ತನಿಖಾ ಸಂಸ್ಥೆಯಿಂದ ತನಿಖೆ ನಡೆಸಿ ಆ ಕುಟುಂಬಕ್ಕೆ ನ್ಯಾಯ ಕೊಡಿಸಲಿ ಎಂದು ಆಗ್ರಹಿಸಿದ್ದಾರೆ.

ನಾನು ಅವರ ದುಃಖಿತ ಕುಟುಂಬವನ್ನು ಭೇಟಿಯಾಗಿ ನಮ್ಮ ಹೃತ್ಪೂರ್ವಕ ಸಂತಾಪ ಸೂಚಿಸಿದೆ ಮತ್ತು ಪಕ್ಷದಿಂದ 25 ಲಕ್ಷ ರೂ.ಗಳ ಆರ್ಥಿಕ ಸಹಾಯವನ್ನು ನೀಡಿದೆ ಎಂದು ತಮ್ಮ ಎಕ್ಸ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net