

ಇಸ್ಲಾಮಾಬಾದ್: ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್ನಲ್ಲಿ ಶುಕ್ರವಾರ ಆತ್ಮಾಹುತಿ ಬಾಂಬ್ ದಾಳಿಯಾಗಿದೆ. ಬಾಂಬ್ ಸ್ಫೋಟದಲ್ಲಿ ಓರ್ವ ಪೊಲೀಸ್ ಮೃತಪಟ್ಟಿದ್ದು, ನಾಲ್ವರು ಪೊಲೀಸರು ಮತ್ತು ಇಬ್ಬರು ನಾಗರಿಕರು ಸೇರಿ 6 ಜನರ ಸ್ಥಿತಿ ಗಂಭೀರವಾಗಿದೆ.
ಇಸ್ಲಾಮಾಬಾದ್‌ನ I-10/4 ಸೆಕ್ಟರ್ ಬಳಿ ಆತ್ಮಾಹುತಿ ಬಾಂಬ್ ದಾಳಿಯಾಗಿದ್ದು, ವಿಶೇಷ ಭಯೋತ್ಪಾದನಾ ನಿಗ್ರಹ ಪಡೆ ಸ್ಥಳಕ್ಕೆ ದೌಡಾಯಿಸಿದೆ. ಪೊಲೀಸ್ ಸಿಬ್ಬಂದಿ ಸುಟ್ಟು ಕರಕಲಾಗಿದ್ದು, ವಾಹನ ಹೊತ್ತಿ ಉರಿದಿದೆ.