ಪಾಕಿಸ್ತಾನದಲ್ಲಿ ಆತ್ಮಾಹುತಿ ಬಾಂಬ್ ದಾಳಿ; 9 ಪೊಲೀಸರ ಸಾವು, ಹಲವರಿಗೆ ಗಾಯ

Bomb Blast
Published on

ಇಸ್ಲಾಮಾಬಾದ್‌: ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದ ಸಿಬಿ ನಗದರಲ್ಲಿ ಸಂಭವಿಸಿದ ಆತ್ಮಾಹುತಿ ದಾಳಿಯಿಂದ 9 ಜನ ಪೊಲೀಸರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಬಾಂಬರ್ ಬೈಕ್​ನಲ್ಲಿ ಬಂದು ಪೊಲೀಸ್​ ಬಸ್​ಗೆ ಡಿಕ್ಕಿ ಹೊಡೆದು ಆತ್ಮಾಹುತಿ ದಾಳಿ ನಡೆಸಿದ್ದಾನೆ ಪೊಲೀಸ್ ಮೂಲಗಳು ತಿಳಿಸಿವೆ ಎಂದು ರಾಯಿಟರ್ಸ್ ವರದಿ ಮಾಡಿದೆ.

ಬಲೂಚಿಸ್ತಾನ್ ಕಾನ್‌ಸ್ಟಾಬ್ಯುಲರಿಯ ಸದಸ್ಯರು ಕರ್ತವ್ಯ ಮುಗಿಸಿ ಹಿಂತಿರುಗುತ್ತಿದ್ದಾಗ ಸ್ಫೋಟ ಸಂಭವಿಸಿದೆ. ಪಾಕಿಸ್ತಾನದ ಪೊಲೀಸ್ ಸಿಬಂದಿಯನ್ನು ಗುರಿಯಾಗಿಸಿಕೊಂಡು ಆತ್ಮಾಹುತಿ ದಾಳಿ ನಡೆದಿದ್ದು, 7 ಪೊಲೀಸರು ಗಾಯಗೊಂಡಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಅಬ್ದುಲ್ ಹೈ ಅಮೀರ್ ತಿಳಿಸಿದ್ದಾರೆ.

ಆದರೆ ಈವರೆಗೂ ದಾಳಿಯ ಹೊಣೆಯನ್ನು ಯಾವುದೇ ಸಂಘಟನೆ ಹೊತ್ತುಕೊಂಡಿಲ್ಲ. ಬಲೂಚಿಸ್ತಾನ ಮುಖ್ಯಮಂತ್ರಿ ಮಿರ್ ಅಬ್ದುಲ್ ಖುದೂಸ್ ಬಿಜೆಂಜೊ ಅವರು ದಾಳಿಯನ್ನು ಖಂಡಿಸಿ, ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ. (ಏಜೆನ್ಸೀಸ್)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net