ಸೂಕ್ತ ಪರಿಹಾರ ನೀಡದಿದ್ದರೆ ಉಪವಾಸ ಸತ್ಯಾಗ್ರಹದ ಎಚ್ಚರಿಕೆ

20-RNR-03
Published on

ರಾಣೆಬೆನ್ನೂರ: ನಗರದ ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಪಿ. ಶಾಂತ ಅವರಿಂದ ಅನಧಿಕೃತ ಗರ್ಭಶಸ್ತ್ರ ಚಿಕಿತ್ಸೆಗೆ ಒಳಗಾದ ಸಂತ್ರಸ್ತ ಮಹಿಳೆಯರಿಗೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಸಂತ್ರಸ್ತ ಮಹಿಳೆಯರು ನಗರದ ಪೋಸ್ಟ್​ ವೃತ್ತದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.
ನೇತೃತ್ವ ವಹಿಸಿದ್ದ ಜಗದೀಶ ಕೆರೂಡಿ ಮಾತನಾಡಿ, ಸಂತ್ರಸ್ತ ಮಹಿಳೆಯರಿಗೆ ಪರಿಹಾರ ನೀಡಲು ಆಗ್ರಹಿಸಿ 2016ರಿಂದ ಹೋರಾಟ ಮಾಡುತ್ತ ಬರಲಾಗಿದೆ. ಆದರೆ, ಈವರೆಗೂ ಯಾವ ಸರ್ಕಾರ, ಸಚಿವರು, ಮುಖ್ಯಮಂತ್ರಿ, ಶಾಸಕರು ನಮಗೆ ಸ್ಪಂದಿಸಿಲ್ಲ. ಈವರೆಗೂ 75 ಬಾರಿ ಮನವಿ ಸಲ್ಲಿಸಲಾಗಿದೆ.
ಪರಿಹಾರಕ್ಕಾಗಿ ಈಗಾಗಲೇ ಮನವಿ ಸಲ್ಲಿಸಿ ಸಾಕಾಗಿ ಹೋಗಿದೆ. ಆದ್ದರಿಂದ ಅಕ್ಟೋಬರ್​ 2ರೊಳಗೆ ಸರ್ಕಾರ ಸೂಕ್ತ ಪರಿಹಾರ ನೀಡಿದರೆ ಸರಿ. ಇಲ್ಲವಾದರೆ ಗಾಂಧಿ ಜಯಂತಿ ದಿನದಿಂದ ತಹಸೀಲ್ದಾರ್​ ಕಚೇರಿ ಎದುರು ಅಹೋರಾತ್ರಿ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಾಗುವುದು. ಇದರಿಂದ ಯಾರಿಗೆ ಏನೇ ತೊಂದರೆ ಎದುರಾದರೂ ಅದಕ್ಕೆ ಸರ್ಕಾರವೇ ನೇರ ಹೊಣೆಯಾಗಲಿದೆ ಎಂದು ಎಚ್ಚರಿಸಿ ತಹಸೀಲ್ದಾರ್​ ಆರ್​.ಎಚ್​. ಭಾಗವಾನ್​ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಪ್ರಮುಖರಾದ ಹನುಮಂತಪ್ಪ ಕಬ್ಬಾರ, ಲಲಿತವ್ವ ಲಮಾಣಿ, ಶೈಲಾ ರಂಗರೆಡ್ಡಿ, ಕ್ಕೀರವ್ವ ಮಲ್ಲಾಪುರ, ಲಕ್ಷ$್ಮವ್ವ ಲಮಾಣಿ, ಗಿರಿಜವ್ವ ಚಕ್ರಸಾಲಿ, ಲಲತಾ ಂಟಿ, ಗಂಗವ್ವ ಲಮಾಣಿ, ಶಂಕ್ರಮ್ಮ ಹಾವೇರಿ, ಲಕ್ಷ$್ಮವ್ವ ಮಣಕೂರ, ದ್ಯಾಮವ್ವ ಲಮಾಣಿ, ಶಾಂತವ್ವ ಲಮಾಣಿ, ಗೀತಾ ಲಮಾಣಿ ಮತ್ತಿತರರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net