ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು; ಪಿ. ಮುನಿಯಪ್ಪ

27-RNR-05
???????
Published on

ರಾಣೆಬೆನ್ನೂರ: ಸ್ವಾಸ್ಥೃ ರಾಷ್ಟ್ರ ನಿರ್ಮಾಣಕ್ಕಾಗಿ ಆರೋಗ್ಯ ಮುಖ್ಯವಾಗಿದೆ ಎಂದು ಪ್ರಾಚಾರ್ಯ ಪಿ. ಮುನಿಯಪ್ಪ ಹೇಳಿದರು.
ತಾಲೂಕಿನ ಸುಣಕಲ್ಲಬಿದರಿ ಗ್ರಾಮದ ಶ್ರೀ ಸದ್ಗುರು ಶಿವಾನಂದ ಸಂಯುಕ್ತ ಪದವಿ ಪೂರ್ವ ಕಾಲೇಜ್‌ನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ಬುಧವಾರ ಹಮ್ಮಿಕೊಂಡ ಆರೋಗ್ಯ ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಹದಿಹರೆಯದವರು ಆರೋಗ್ಯದ ಬಗ್ಗೆ ಕಾಳಜಿವಹಿಸಿದರೆ ಅನಾರೋಗ್ಯ ತಡೆಗಟ್ಟಬಹುದು. ವಿದ್ಯಾರ್ಥಿಗಳಿಗೆ ಮಾನಸಿಕ ಮತ್ತು ದೈಹಿಕ ಬದಲಾವಣೆ ಬಗ್ಗೆ ಸೂಕ್ತ ತಿಳುವಳಿಕೆ ಇಂದಿನ ಜನಾಂಗದವರಿಗೆ ಅವಶ್ಯವಾಗಿದೆ ಎಂದರು.
ಸಾರ್ವಜನಿಕ ಆಸ್ಪತ್ರೆಯ ಆಪ್ತ ಸಮಾಲೋಚಕ ಮಾರುತಿ ಎಚ್.ಬಿ. ಮಾತನಾಡಿ, ಸದೃಢ ಸಮಾಜ ನಿರ್ಮಾಣದಲ್ಲಿ ಆರೋಗ್ಯ ಮುಖ್ಯವಾಗಿದ್ದು, ಕೆಲಸದ ಜತೆಗೆ ಆರೋಗ್ಯದ ಬಗ್ಗೆ ಕಾಳಜಿ ವಹಿಸಿಕೊಳ್ಳಬೇಕು. ಕ್ಷಯರೋಗ ಲಕ್ಷಣಗಳು, ಕ್ಷಯರೋಗ ಪರೀಕ್ಷೆ, ಚಿಕಿತ್ಸೆ, ಸರ್ಕಾರದ ಸೌಲಭ್ಯಗಳ ಅರಿತುಕೊಂಡು ಕ್ಷಯರೋಗವನ್ನು ದೂರವಿಡಬೇಕು ಎಂದರು.
ಎನ್‌ಎಸ್‌ಎಸ್ ಯೋಜನಾಧಿಕಾರಿ ಎಚ್. ಶಿವಾನಂದ, ಉಪನ್ಯಾಸಕರಾದ ರೇವಣ್ಣ ನಾಯ್ಕ, ಸಂತೋಷ ಅಂಗಡಿ, ರೇಣುಕಾ ಗಳಗನಾಥ, ಪೂರ್ಣಿಮಾ ಮಾಗನೂರು ಮತ್ತಿತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net