ರಾಣೆಬೆನ್ನೂರ: ಶಿಕ್ಷಣದ ಜತೆಗೆ ಸಂಸ್ಕೃತಿ, ಸಂಸ್ಕಾರ, ನೈತಿಕ ಮೌಲ್ಯಗಳನ್ನು ಕಲಿತುಕೊಳ್ಳಬೇಕು ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಮಲ್ಲಿಕಾರ್ಜುನಪ್ಪ ಅರಳಿ ಹೇಳಿದರು.
ತಾಲೂಕಿನ ಸುಣಕಲ್ಲಬಿದರಿ ಗ್ರಾಮದ ಸದ್ಗುರು ಶಿವಾನಂದ ಸಂಯುಕ್ತ ಪದವಿ ಪೂರ್ವ ಕಾಲೇಜ್‌ನ 2023-24ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ, ಹಸಿರು ಪಡೆ, ಭಾರತ ಸೇವಾ ದಳ, ವಿದ್ಯಾರ್ಥಿ ಸಂಘ ಉದ್ಘಾಟಿಸಿ ಅವರು ಮಾತನಾಡಿದರು.
ಪ್ರಸ್ತುತ ವಿದ್ಯಾರ್ಥಿಗಳಿಗೆ ಶಿಕ್ಷಣದ ಜತೆಗೆ ಸಂಸ್ಕಾರ ಅವಶ್ಯಕವಾಗಿದ್ದು ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಬೇಕು ಎಂದರು.
ಪ್ರಾಚಾರ್ಯ ಪಿ. ಮುನಿಯಪ್ಪ ಅಧ್ಯಕ್ಷತೆ ವಹಿಸಿದ್ದರು.
ಬಿಎಜೆಎಸ್‌ಎಸ್ ಕಾಲೇಜ್‌ನ ಪ್ರಾಚಾರ್ಯ ಡಾ. ಮೃತ್ಯುಂಜಯ್ಯ ಎಂ.ಎಂ., ಉಪನ್ಯಾಸಕರಾದ ಎಚ್. ಶಿವಾನಂದ, ಸಂತೋಷಕುಮಾರ ಅಂಗಡಿ, ಪೂರ್ಣಿಮಾ ಮಾಗನೂರು, ರೇಣುಕಾ ಗಳಗನಾಥ, ಶಿಲ್ಪಾ ಕೆಂಚರೆಡ್ಡಿ, ಅಶೋಕ ಲಮಾಣಿ, ಬಿ.ಎ. ವಿಜಯಕುಮಾರ ಮತ್ತಿತರರು ಉಪಸ್ಥಿತರಿದ್ದರು.