ಶಾಂತಿನಗರಕ್ಕೆ ಸಮರ್ಪಕ ನೀರು ಪೂರೈಸಿ

shanti nagara
ಸಮರ್ಪಕ ಕುಡಿಯುವ ನೀರು ಪೂರೈಕೆಗೆ ಒತ್ತಾಯಿಸಿ ಸಯ್ಯದ್ ಮುಜೀಬುಲ್ಲಾ, ರಸೂಲ್, ಸಯ್ಯದ್, ಅಮಿನಾ, ಇತರರು ಪ್ರತಿಭಟನೆ ನಡೆಸಿದರು.
Published on

ಶಿವಮೊಗ್ಗ: ಶಾಂತಿನಗರದಲ್ಲಿ ಸಮರ್ಪಕವಾಗಿ ಕುಡಿಯುವ ನೀರು ಪೂರೈಕೆ ಮಾಡುವಂತೆ ಒತ್ತಾಯಿಸಿ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಸಹಾಯಕ ಕಾರ್ಯಪಾಲಕ ಅಭಿಯಂತರ ಕಚೇರಿ ಎದುರು ಶಾಂತಿ ನಗರ ನಾಗರಿಕ ಹಕ್ಕು ವೇದಿಕೆ ನೇತೃತ್ವದಲ್ಲಿ ಸ್ಥಳೀಯರು ಮಂಗಳವಾರ ಪ್ರತಿಭಟನೆ ನಡೆಸಿದರು.

ನಮ್ಮ ಭಾಗದಲ್ಲಿ ಹಲವು ವರ್ಷಗಳಿಂದಲೂ ಕುಡಿಯುವ ನೀರಿನ ಸಮಸ್ಯೆಯಿದೆ. ಪ್ರತಿ ದಿನ ನಿಗದಿತ ಸಮಯಕ್ಕೆ ನೀರು ಪೂರೈಕೆಯಾಗುವುದಿಲ್ಲ. ಕೂಲಿ ಕಾರ್ಮಿಕರು, ಬಡ ಜನರೇ ಹೆಚ್ಚಿರುವ ಈ ಬಡಾವಣೆಯಲ್ಲಿ ನೀರಿನ ಸಮಸ್ಯೆಯಿಂದ ಜನರು ಪರಿತಪಿಸುವಂತಾಗಿದೆ ಎಂದು ಪ್ರತಿಭಟನಾಕಾರರು ಹೇಳಿದರು.
ವೇದಿಕೆ ಅಧ್ಯಕ್ಷ ಸಯ್ಯದ್ ಮುಜೀಬುಲ್ಲಾ, ಸ್ಥಳೀಯರಾದ ಅಮಿನಾ, ಸೈಯ್ಯದ್, ರಸೂಲ್, ಆಸ್ಮಾ ಪ್ರತಿಭಟನೆಯಲ್ಲಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net