

ನವದೆಹಲಿ: ದೆಹಲಿಯಲ್ಲಿ ದೀಪಾವಳಿಯಂದು ಪಟಾಕಿ ಸಿಡಿಸಲು ಕಾದು ಕುಳಿತಿದ್ದ ಜನರಿಗೆ ಶಾಕ್ ಆಗಿದೆ. ದೀಪಾವಳಿಯಂದು ದೆಹಲಿಯಲ್ಲಿ ಪಟಾಕಿ ಸಿಡಿಸುವುದನ್ನು ನಿಷೇಧಿಸುವ ದೆಹಲಿ ಸರ್ಕಾರದ ನಿರ್ಧಾರದಲ್ಲಿ ಮಧ್ಯಪ್ರವೇಶಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ಇದರೊಂದಿಗೆ ಬೇರಿಯಂ ಬಳಸಿ ಪಟಾಕಿ ತಯಾರಿಕೆ ಮತ್ತು ಬಳಕೆಗೆ ಆಗ್ರಹಿಸಿ ಸಲ್ಲಿಸಿದ್ದ ಅರ್ಜಿಯನ್ನೂ ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಈ ಪಟಾಕಿಗಳನ್ನು ತಯಾರಿಸುವ ಮತ್ತು ಮಾರಾಟ ಮಾಡುವ ಪ್ರಕ್ರಿಯೆಯ ಬಗ್ಗೆ ಪಟಾಕಿ ತಯಾರಕರು ಸುಪ್ರೀಂ ಕೋರ್ಟ್ಗೆ ಮಾಹಿತಿ ನೀಡಿದ್ದರು. ಜತೆಗೆ ತಮ್ಮ ನಿರ್ಮಾಣಕ್ಕೆ ಅನುಮೋದನೆ ನೀಡುವಂತೆ ಮನವಿ ಮಾಡಿದ್ದರು.
ನಿಷೇಧ ಹೇರಿದ ಕೇಜ್ರಿವಾಲ್ ಸರ್ಕಾರ
ದೆಹಲಿಯ ಕೇಜ್ರಿವಾಲ್ ಸರ್ಕಾರ ಇತ್ತೀಚೆಗೆ ರಾಜ್ಯದಲ್ಲಿ ಪಟಾಕಿ ತಯಾರಿಕೆ, ಮಾರಾಟ ಮತ್ತು ಸಂಗ್ರಹಣೆಯನ್ನು ನಿಷೇಧಿಸಿತ್ತು. ಪಟಾಕಿ ಸುಡಬೇಡಿ, ಜನರ ಆರೋಗ್ಯ ಮುಖ್ಯ ಎಂದು ನ್ಯಾಯಾಲಯ ಈ ಹಿಂದೆಯೂ ಹೇಳಿತ್ತು. ಸರ್ಕಾರ ಕೈಗೊಂಡಿರುವ ನಿರ್ಧಾರವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿತ್ತು.