ಕೇಜ್ರಿವಾಲ್​ಗೆ ಮತ್ತೊಂದು ಶಾಕ್..ಮಧ್ಯಂತರ ಜಾಮೀನು ನೀಡಲು ನಿರಾಕರಿಸಿದ ಸುಪ್ರೀಂ ಕೋರ್ಟ್

kejriwal
Published on

ನವದೆಹಲಿ: ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಮತ್ತೊಂದು ಶಾಕ್ ಎದುರಾಗಿದೆ. ಆಗಸ್ಟ್ 14(ಬುಧವಾರ) ಕೇಜ್ರಿವಾಲ್ ಅವರ ಜಾಮೀನು ಅರ್ಜಿಯ ವಿಚಾರಣೆ ವೇಳೆ ಮಧ್ಯಂತರ ಜಾಮೀನು ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.

ಕೇಜ್ರಿವಾಲ್ ಪರವಾಗಿ ನ್ಯಾಯಾಲಯಕ್ಕೆ ಹಾಜರಾದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು ಆರೋಗ್ಯ ಕಾರಣಗಳನ್ನು ಉಲ್ಲೇಖಿಸಿ ಮಧ್ಯಂತರ ಜಾಮೀನಿಗೆ ಮನವಿ ಮಾಡಿದರು. ಮಧ್ಯಂತರ ಜಾಮೀನು ನೀಡುವಂತಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ಆದರೆ, ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಸಿಬಿಐ ತನ್ನ ವಿರುದ್ಧ ದಾಖಲಿಸಿರುವ ಪ್ರಕರಣದಲ್ಲಿ ಜಾಮೀನು ಕೋರಿ ಅರವಿಂದ್ ಕೇಜ್ರಿವಾಲ್ ಮತ್ತೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಈ ಆದೇಶದಲ್ಲಿ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಅವರನ್ನೊಳಗೊಂಡ ಪೀಠವು ಸಿಬಿಐಗೆ ನೋಟಿಸ್ ಜಾರಿಗೊಳಿಸಿ ಅದರ ಉತ್ತರವನ್ನು ಕೇಳಿದೆ. ಈ ಪ್ರಕರಣದ ಮುಂದಿನ ವಿಚಾರಣೆ ಆಗಸ್ಟ್ 23 ರಂದು ನಡೆಯಲಿದೆ ಎಂದು ನ್ಯಾಯಾಲಯ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net