

ಈ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಸುಪ್ರೀಂ ಕೋರ್ಟ್ ಎಸ್‌ಐಟಿ ತನಿಖೆಯ ವರದಿಯನ್ನು ಕೇಳಿದೆ. ಮತ್ತು ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕರ ವಾಕ್ ಮತ್ತು ಅಭಿವ್ಯಕ್ತಿ ಹಕ್ಕಿಗೆ ಯಾವುದೇ ಅಡ್ಡಿಯಿಲ್ಲ, ಪ್ರಕರಣಗಳಿಗೆ ಸಂಬಂಧಿಸಿದಂತೆ ಅವರು ಆನ್‌ಲೈನ್‌ನಲ್ಲಿ ಏನನ್ನೂ ಪೋಸ್ಟ್ ಮಾಡಬಾರದು ಎಂದು ಹೇಳಿದ್ದಾರೆ.
ನವದೆಹಲಿ: ಆಪರೇಷನ್ ಸಿಂಧೂರ್ ಕುರಿತ ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಹರಿಯಾಣದ ಅಶೋಕ ವಿಶ್ವವಿದ್ಯಾಲಯದ ಸಹ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ಅವರಿಗೆ ಸುಪ್ರೀಂ ಕೋರ್ಟ್ ಇಂದು (28) ಮಧ್ಯಂತರ ಜಾಮೀನು ವಿಸ್ತರಿಸಿದೆ.
ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಎಫ್‌ಐಆರ್‌ಗಳ ಕುರಿತು ಎನ್‌ಎಚ್‌ಆರ್‌ಸಿ ನೋಟಿಸ್‌ಗೆ ತಮ್ಮ ಪ್ರತಿಕ್ರಿಯೆಯ ಬಗ್ಗೆ ತಿಳಿಸುವಂತೆ ಸುಪ್ರೀಂ ಕೋರ್ಟ್ ಹರಿಯಾಣ ಪೊಲೀಸರನ್ನು ಹೇಳಿದೆ.
ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ದೀಪಂಕರ್ ದತ್ತ ಅವರ ಪೀಠ, ಆರೋಪಿ ಪ್ರಾಧ್ಯಾಪಕರಿಗೆ ನೀಡಲಾದ ಮಧ್ಯಂತರ ಜಾಮೀನನ್ನು ವಿಸ್ತರಿಸುತ್ತಿರುವುದಾಗಿ ಮತ್ತು ಮುಂದಿನ ವಿಚಾರಣೆಯ ದಿನಾಂಕದಂದು ತನಿಖಾ ವರದಿಯನ್ನು ಸಲ್ಲಿಸುವಂತೆ ಎಸ್‌ಐಟಿಗೆ ನಿರ್ದೇಶನ ನೀಡಿದೆ.
ಭಯೋತ್ಪಾದಕ ದಾಳಿ ಅಥವಾ ಭಾರತೀಯ ಸಶಸ್ತ್ರ ಪಡೆಗಳು ನೀಡಿದ ಪ್ರತಿಕ್ರಿಯೆಗೆ ಸಂಬಂಧಿಸಿದಂತೆ ಯಾವುದೇ ಅಭಿಪ್ರಾಯವನ್ನು ವ್ಯಕ್ತಪಡಿಸದಂತೆ ಉನ್ನತ ನ್ಯಾಯಾಲಯವು ಪ್ರಾಧ್ಯಾಪಕರಿಗೆ ನಿರ್ಬಂಧಿಸಿತ್ತು.
ಆಪರೇಷನ್ ಸಿಂಧೂರ್ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ್ದ ಕರ್ನಲ್ ಸೋಫಿಯಾ ಖುರೇಷಿ ಮತ್ತು ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ವಿರುದ್ಧ ವಿವಾದಾತ್ಮಕ ಪೋಸ್ಟ್ ಹಾಕಿದ ಆರೋಪದ ಮೇಲೆ ಅಲಿ ಖಾನ್ ಅವರನ್ನು ದೆಹಲಿಯಲ್ಲಿ ಬಂಧಿಸಲಾಗಿತ್ತು. ಬಳಿಕ ಸುಪ್ರೀಂ ಕೋರ್ಟ್ ಅವರಿಗೆ ಮೇ 21 ರಂದು ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
(ಏಜೆನ್ಸೀಸ್)