ಸುಪ್ರೀಂ ಕೋರ್ಟ್​ನ ನ್ಯಾಯಮೂರ್ತಿಯಾಗಿ ಪ್ರಸನ್ನ ಬಿ ವರಾಳೆ ಪ್ರಮಾಣ ಸ್ವೀಕಾರ

Prasanna B Varale
Published on

ನವದೆಹಲಿ: ಸುಪ್ರೀಂ ಕೋರ್ಟ್​ನ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಸನ್ನ ಬಾಲಚಂದ್ರ ವರಾಳೆ ಅವರು ಗುರುವಾರ ಪ್ರಮಾಣವಚನ ಸ್ವೀಕರಿಸಿದ್ದಾರೆ. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು ಅವರು ಬಾಲಚಂದ್ರ ವರಾಳೆ ಅವರಿಗೆ ಪ್ರಮಾಣ ವಚನ ಬೋಧಿಸಿದ್ದಾರೆ.

ಸುಪ್ರೀಂ ಕೋರ್ಟ್ ಕೊಲಿಜಿಯಂ ಜನವರಿ 19ರಂದು ನ್ಯಾಯಮೂರ್ತಿ ವರಾಳೆ ಅವರನ್ನು ಭಾರತದ ಸುಪ್ರೀಂ ಕೋರ್ಟ್ ನ್ಯಾಯಾಧೀಶರನ್ನಾಗಿ ನೇಮಕ ಮಾಡಲು ಶಿಫಾರಸು ಮಾಡಿತ್ತು. ಈ ಸಂಬಂಧ ರಾಷ್ಟ್ರಪತಿಗಳು ಜನವರಿ 24ರಂದು ನ್ಯಾಯಮೂರ್ತಿ ವರಾಳೆ ಅವರನ್ನು ನೇಮಿಸಿ ನ್ಯಾಯಮೂರ್ತಿಯನ್ನಾಗಿ ನೇಮಿಸಿ ಅಧಿಸೂಚನೆ ಹೊರಡಿಸಿದ್ದರು.

ನ್ಯಾಯಮೂರ್ತಿ ವರಾಳೆ ಅವರು ಪರಿಶಿಷ್ಟ ಜಾತಿಗೆ ಸೇರಿದ ಹೈಕೋರ್ಟ್‌ನ ಅತ್ಯಂತ ಹಿರಿಯ ನ್ಯಾಯಾಧೀಶರಾಗಿದ್ದು, ದೇಶಾದ್ಯಂತ ಇರುವ ಹೈಕೋರ್ಟ್‌ಗಳ ಮುಖ್ಯ ನ್ಯಾಯಮೂರ್ತಿಗಳಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಏಕೈಕ ಮುಖ್ಯ ನ್ಯಾಯಮೂರ್ತಿಯಾಗಿದ್ದಾರೆ. ನ್ಯಾಯಮೂರ್ತಿ ಬಿ.ಆರ್. ಗವಾಯಿ ಮತ್ತು ಸಿ.ಟಿ. ರವಿಕುಮಾರ್ ನಂತರ ದಲಿತ ಸಮುದಾಯದಿಂದ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಮೂರನೇ ನ್ಯಾಯಮೂರ್ತಿ ಇವರಾಗಿದ್ದಾರೆ.

ನ್ಯಾಯಮೂರ್ತಿ ವರಾಳೆ ಅವರು ಆಗಸ್ಟ್ 1985ರಲ್ಲಿ ವಕೀಲರಾಗಿ ನೋಂದಾಯಿಸಿದ್ದು, 1992ರವರೆಗೆ ಔರಂಗಾಬಾದ್‌ನ ಅಂಬೇಡ್ಕರ್ ಕಾನೂನು ಕಾಲೇಜಿನಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದರು. 2008ರ ಜುಲೈ 18ರಂದು ಬಾಂಬೆ ಹೈಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದ ನ್ಯಾ. ವರಾಳೆ ಅವರು ಅಕ್ಟೋಬರ್ 15, 2022ರಂದು ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಬಡ್ತಿ ಪಡೆದಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net