ಪೋಕ್ಸೋ ಕೇಸ್​​ನಲ್ಲಿ ಮುರುಘಾ ಶ್ರೀಗಳಿಗೆ ಮತ್ತೊಮ್ಮೆ ಹಿನ್ನಡೆ; ಜಾಮೀನು ರದ್ದುಗೊಳಿಸಿದ ಸುಪ್ರೀಂಕೋರ್ಟ್

Murugha Shree
Published on

ನವದೆಹಲಿ: ಮಠದ ವಸತಿ ನಿಲಯದಲ್ಲಿ ವಾಸವಿದ್ದ ಅಪ್ರಾಪ್ತ ವಯಸ್ಕ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುರುಘಾ ಶ್ರೀಗಳಿಗೆ ನೀಡಲಾಗಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್​ ರದ್ದುಪಡಿಸಿ ಜೈಲಿಗೆ ವಾಪಸ್​ ಕಳಿಸುವಂತೆ ಆದೇಶಿಸಿದೆ.

ಮುರುಘಾ ಶ್ರೀಗಳಿಗೆ ಜಾಮೀನು ನೀಡಿದ್ದನ್ನು ಪ್ರಶ್ನಿಸಿ ಅರು ಕರ್ನಾಟಕ ಕಹೈಕೋರ್ಟ್​ ಕ್ರಮ ಪ್ರಶ್ನಿಸಿ ಅರ್ಜಿದಾರರು ಸುಪ್ರೀಂ ಕೋರ್ಟ್​ ಮೊರೆ ಹೋಗಿದ್ದರು. ಆಅರ್ಜಿ ವಿಚಾರನೆ ನಡೆಸಿದ ನ್ಯಾಯಪೀಠವು ವಾದ-ಪ್ರತಿವಾದವನ್ನು ಸುದೀರ್ಘವಾಗಿ ಆಲಿಸಿದ ಬಳಿಕ ಮುರುಘಾ ಶ್ರೀಗಳ ಜಾಮೀನು ಅರ್ಜಿಯನ್ನು ರದ್ದು ಪಡಿಸಿ ಜೈಲಿಗೆ ವಾಪಸ್​ ಕಳಿಸುವಂತೆ ಸೂಚಿಸಿದೆ.

ಪ್ರಕರಣದ ಹಿನ್ನೆಲೆ

ಮಠದ ವಸತಿ ನಿಲಯದಲ್ಲಿ ವಾಸವಿದ್ದ ಅಪ್ರಾಪ್ತ ವಯಸ್ಕ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುರುಘಾ ಶ್ರೀಗಳನ್ನು ಸೆಪ್ಟೆಂಬರ್ 01, 2022ರಂದು ಪೋಕ್ಸೋ ಕಾಯ್ದೆ ಅಡಿ ಬಂಧಿಸಲಾಗಿತ್ತು. ಸುಮಾರು 14ತಿಂಗಳ ಕಾಲ ಜೈಲಿನಲ್ಲಿದ್ದ ಮುರುಘಾ ಶ್ರೀಗಳು ನವೆಂಬರ್ 16, 2023ರಂದು ಷರತ್ತುಬದ್ಧ ಜಾಮೀನಿನ ಮೇಲೆ ಬಿಡುಗಡೆ ಆಗಿದ್ದರು.

 ಪೋಕ್ಸೋ ಕೇಸ್ ಇದ್ದರೂ ಹೈಕೋರ್ಟ್‌ನಿಂದ ಜಾಮೀನಿನ ಮೇಲೆ ಹೊರಗೆ ಬಂದು ಸಾಕ್ಷಿ ನಾಶ ಮಾಡುತ್ತಿದ್ದಾರೆ ಎಂದು ಪೋಕ್ಸೋ ಕೇಸ್ ದಾಖಲಿಸಿದ ಅರ್ಜಿದಾರರು ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದರು. ಈ ಅರ್ಜಿಯನ್ನು ವಿಚಾರಣೆ ಮಾಡಿದ ಸುಪ್ರೀಂ ಕೋರ್ಟ್‌ ಮುರುಘಾ ಶ್ರೀಗೆ ಹೈಕೋರ್ಟ್‌ನಿಂದ ನೀಡಲಾಗಿದ್ದ ಜಾಮೀನು ರದ್ದುಗೊಳಿಸಿ ಪುನಃ ಜೈಲಿಗೆ ಕಳಿಸುವಂತೆ ಸೂಚನೆಯನ್ನು ನೀಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net