

ನವದೆಹಲಿ: ಎಂಟು ಜನರ ಸಾವಿಗೆ ಕಾರಣವಾಗಿದ್ದ ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಅವರಿಗೆ ಸುಪ್ರೀಂ ಕೋರ್ಟ್ ಇಂದು ಜಾಮೀನು ಮಂಜೂರು ಮಾಡಿದೆ.
ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಉಜ್ಜಲ್0 ಭುಯಾನ್ ಅವರನ್ನೊಳಗೊಂಡ ದ್ವಿದಸ್ಯ ಪೀಠವು ಅರ್ಜಿ ವಿಚಾರಣೆ ನಡೆಸಿ ಅದೇಶ ಹೊರಡಿಸಿದೆ. ದೆಹಲಿ ಅಥವಾ ಲಕ್ನೋಗೆ ಪ್ರವೇಶಿಸಿದಂತೆ ಆಶಿಶ್ ಮಿಶ್ರಾ ಅವರಿಗೆ ನಿರ್ಬಂಧ ವಿಧಿಸಲಾಗಿದೆ. ಜೊತೆ ಈ ಪ್ರಕರಣವನ್ನು ತ್ವರಿತಗೊಳಿಸುವಂತೆ ವಿಚಾರಣಾ ನ್ಯಾಯಾಲಕ್ಕೆ ಸೂಚಿಸಿದೆ.
" ವಿಚಾರಣೆಗೆ ಹಾಜರಾಗುವ ಎಲ್ಲಾ ಸಾಧ್ಯೆತಗಳನ್ನು ಪರಿಗಣಿಸಿ ಆರೋಪಿಗೆ ಜಾಮೂನು ಮಂಜೂರು ಮಾಡಲಾಗಿದೆ. 117 ಸಾಕ್ಷಿಗಳ ಪೈಕಿ ಏಳು ಮಂದಿಯನ್ನು ಇದುವರೆಗೆ ವಿಚಾರಣೆಗೆ ಒಳಪಡಿಸಲಾಗಿದೆ. ಉಳಿದ ಸಾಕ್ಷಿಗಳ ಹೇಳಿಕೆ ದಾಖಲಿಸುವ ಮೂಲಕ ಈ ಪ್ರಕರಣವನ್ನು ತ್ವರಿತಗೊಳಿಸುವಂತೆ ವಿಚಾರಣಾ ನ್ಯಾಯಾಲಯಕ್ಕೆ ಸೂಚಿಸಲಾಗಿದೆ ಎಂದು ನ್ಯಾಯಪೀಠ ಹೇಳಿದೆ.
2023ರ ಸೆ.26ರಂದು ಆಶಿಶ್ ಮಿಶ್ರಾಗೆ ನೀಡಿದ್ದ ಮಧ್ಯಂತರ ಜಾಮೀನಿನಲ್ಲಿನ ಷರತ್ತುಗಳನ್ನು ಸಡಿಲಗೊಳಿಸಿದ್ದ ಸುಪ್ರೀಂ ಕೋರ್ಟ್, ಅನಾರೋಗ್ಯಕ್ಕೀಡಾಗಿದ್ದ ತಾಯಿಯನ್ನು ನೋಡಿಕೊಳ್ಳಲು ಹಾಗೂ ಪುತ್ರಿಗೆ ಚಿಕಿತ್ಸೆ ಕೊಡಿಸುವುದಕ್ಕಾಗಿ ದೆಹಲಿಗೆ ಭೇಟಿ ನೀಡಲು ಆಶಿಶ್‍ಗೆ ಅನುವು ಮಾಡಿಕೊಟ್ಟಿತ್ತು. ಜತೆಗೆ ಮಧ್ಯಂತರ ಜಾಮೀನಿನ ಅವಧಿಯನ್ನು ಸುಪ್ರೀಂ ಕೋರ್ಟ್ ವಿಸ್ತರಿಸಿತ್ತು.
ಉತ್ತರಪ್ರದೇಶದ ಉಪಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಅವರ ಭೇಟಿಯನ್ನು ವಿರೋಧಿಸಿ ರೈತರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ಹಿಂಸಾಚಾರ ನಡೆದಿತ್ತು. ಈ ವೇಳೆ ಅಜಯ್ ಮಿಶ್ರಾ ಕಾರು ಪ್ರತಿಭಟನಾ ನಿರತ ರೈತರ ಮೇಲೆ ಹರಿದು ರೈತರ ಸಾವಿಗೆ ಕಾರಣವಾಗಿತ್ತು. ಘಟನೆಯ ಬಳಿಕ ರೈತರು ಇಬ್ಬರು ಬಿಜೆಪಿ ಕಾರ್ಯಕರ್ತರನ್ನು ಹತ್ಯೆ ಮಾಡಿದ್ದರು. ಹಿಂಸಾಚಾರದ ವೇಳೆ ಪತ್ರಕರ್ತರೊಬ್ಬರು ಸಾವಿಗೀಡಾಗಿದ್ದರು.