NALSA ಕಾರ್ಯನಿರ್ವಾಹಕ ಅಧ್ಯಕ್ಷರಾಗಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಸೂರ್ಯಕಾಂತ್ ನೇಮಕ| NALSA

suryakanth
Published on

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು (ಮೇ 10) ಸುಪ್ರೀಂ ಕೋರ್ಟ್ ನ್ಯಾಯಾಧೀಶ ಸೂರ್ಯಕಾಂತ್ ಅವರನ್ನು ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ (NALSA) ಕಾರ್ಯನಿರ್ವಾಹಕ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ.

ಕಾರ್ಯನಿರ್ವಾಹಕ ಅಧ್ಯಕ್ಷರಾಗಿ, ನ್ಯಾಯಮೂರ್ತಿ ಸೂರ್ಯ ಕಾಂತ್ ಅವರು ಎಲ್ಲಾ ನಾಗರಿಕರಿಗೆ, ವಿಶೇಷವಾಗಿ ಭಾರತದಾದ್ಯಂತ ಸಮಾಜದ ಅಂಚಿನಲ್ಲಿರುವ ಮತ್ತು ಆರ್ಥಿಕವಾಗಿ ದುರ್ಬಲ ವರ್ಗಗಳವರಿಗೆ ಸುಲಭವಾಗಿ ಮತ್ತು ಉಚಿತ ಕಾನೂನು ನೆರವು ಒದಗಿಸುವ NALSA ಧ್ಯೇಯವನ್ನು ಮುನ್ನಡೆಸಲಿದ್ದಾರೆ ಎಂದು NALSA ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಗವಾಯಿ ಅವರು ಇದೇ 14ರಂದು ಸುಪ್ರೀಂ ಕೋರ್ಟ್‌ನ 52ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ನ್ಯಾಯಮೂರ್ತಿ ಸೂರ್ಯಕಾಂತ್ ಅವರು ಪ್ರಸ್ತುತ ಸುಪ್ರೀಂ ಕೋರ್ಟ್‌ನ ಕಾನೂನು ಸೇವಾ ಸಮಿತಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಇದಕ್ಕೂ ಮುನ್ನ ನ್ಯಾಯಮೂರ್ತಿ ಬಿ.ಆರ್.ಗವಾಯಿ ಈ ಸ್ಥಾನದಲ್ಲಿದ್ದರು. ಸಂಪ್ರದಾಯದಂತೆ ಸುಪ್ರೀಂ ಕೋರ್ಟ್‌ ಎರಡನೇ ಅತಿ ಹಿರಿಯ ನ್ಯಾಯಮೂರ್ತಿಯವರನ್ನು ಈ ಸ್ಥಾನಕ್ಕೆ ನೇಮಿಸಲಾಗುತ್ತದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net