ಜಾತಿ ಗಣತಿ ವರದಿ ಪ್ರಕಟಿಸುವುದನ್ನು ತಡೆಯಲಾಗದು: ಸುಪ್ರೀಂಕೋರ್ಟ್​ನಲ್ಲಿ ಬಿಹಾರ ಸರ್ಕಾರಕ್ಕೆ ರಿಲೀಫ್​

Supremecourt
Published on

ಪಟನಾ: ಜಾತಿ ಗಣತಿ ವರದಿ ಬಿಡುಗಡೆ ಮಾಡಿದ ವಿಚಾರದಲ್ಲಿ ಬಿಹಾರ ಸರ್ಕಾರ ಸುಪ್ರೀಂಕೋರ್ಟ್​ನಲ್ಲಿ ಮುನ್ನಡೆ ಸಾಧಿಸಿದೆ. ಸರ್ಕಾರದ ನೀತಿ ನಿರ್ಧಾರಗಳಲ್ಲಿ ನಾವು ಮಧ್ಯ ಪ್ರವೇಶ ಮಾಡುವುದಿಲ್ಲ ಎಂದು ಉನ್ನತ ನ್ಯಾಯಾಲಯ ಶುಕ್ರವಾರ (ಅ.6) ತಿಳಿಸಿದೆ.

ಜಾತಿ ವರದಿ ಬಿಡುಗಡೆ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಸರ್ಕಾರವು ಜಾತಿ ಗಣತಿಯ ಮಾಹಿತಿಯನ್ನು ಪ್ರಕಟಿಸುವುದನ್ನು ತಡೆಯವುದಿಲ್ಲ. ರಾಜ್ಯ ಸರ್ಕಾರ ಅಥವಾ ಯಾವುದೇ ಸರ್ಕಾರ ನಿರ್ಧಾರ ತೆಗೆದುಕೊಳ್ಳುವುದನ್ನು ತಡೆಯಲು ಸಾಧ್ಯವಿಲ್ಲ. ಅದು ತಪ್ಪಾಗುತ್ತದೆ. ಆದರೆ, ಜಾತಿ ಆಧಾರಿತ ಸಮೀಕ್ಷೆಯ ದತ್ತಾಂಶಕ್ಕೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆಯನ್ನು ಪರಿಗಣಿಸುತ್ತೇವೆ ಎಂದು ನ್ಯಾಯಾಲಯ ಹೇಳಿದೆ.

ರಾಜ್ಯದಲ್ಲಿ ಜಾತಿ ಆಧಾರಿತ ಸಮೀಕ್ಷೆಗೆ ಸಂಬಂಧಿಸಿದ ಮನವಿಯ ಕುರಿತು ಸುಪ್ರೀಂ ಕೋರ್ಟ್ ಬಿಹಾರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದ್ದು, ಜನವರಿ 2024ಕ್ಕೆ ಮುಂದಿನ ವಿಚಾರಣೆಯನ್ನು ಪಟ್ಟಿ ಮಾಡಿದೆ ಮತ್ತು ರಾಜ್ಯದಲ್ಲಿ ಜಾತಿವಾರು ಸಮೀಕ್ಷೆಯ ಅಂಕಿ-ಅಂಶಗಳ ಪ್ರಕಟಣೆಯಿಂದಾಗಿ ಉದ್ಭವಿಸಿರುವ ಸಮಸ್ಯೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.

ಕೆಲವು ಅಂಕಿ-ಅಂಶಗಳನ್ನು ಪ್ರಕಟಿಸುವ ಮೂಲಕ ರಾಜ್ಯ ಸರ್ಕಾರವು ತಡೆಯಾಜ್ಞೆಗೆ ಮುನ್ನುಡಿ ಬರೆದಿದೆ ಮತ್ತು ದತ್ತಾಂಶಗಳ ಹೆಚ್ಚಿನ ಪ್ರಕಟಣೆಗೆ ಸಂಪೂರ್ಣ ತಡೆಯಾಜ್ಞೆ ನೀಡಬೇಕು ಎಂಬ ಅರ್ಜಿದಾರರ ಆಕ್ಷೇಪವನ್ನು ನ್ಯಾಯಾಲಯ ತಳ್ಳಿಹಾಕಿದೆ

ಕಳೆದ ವಾರ ಬಿಡುಗಡೆ ಮಾಡಿದ ಜಾತಿ ಗಣತಿ ವರದಿಯಲ್ಲಿ ರಾಜ್ಯದ 13.1 ಕೋಟಿ ಜನಸಂಖ್ಯೆಯಲ್ಲಿ 36% ಅತ್ಯಂತ ಹಿಂದುಳಿದ ವರ್ಗಗಳಿಗೆ, 27.1% ಹಿಂದುಳಿದ ವರ್ಗಗಳಿಗೆ, 19.7% ಪರಿಶಿಷ್ಟ ಜಾತಿಗಳಿಗೆ ಮತ್ತು 1.7% ಪರಿಶಿಷ್ಟ ಪಂಗಡಗಳಿಗೆ ಸೇರಿದೆ ಎಂದು ಬಿಹಾರ ಸರ್ಕಾರ ಹೇಳಿದೆ. ಅಲ್ಲದೆ, ಸಾಮಾನ್ಯ ಜನಸಂಖ್ಯೆಯು 15.5% ರಷ್ಟಿದೆ ಎಂದು ತಿಳಿಸಿದೆ. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net