ಬಿಜೆಪಿ ಹೋರಾಟಕ್ಕೆ ಸಂದ ಜಯ; ಸುಪ್ರೀಂ ತೀರ್ಪು ಸ್ವಾಗತಾರ್ಹ: ಬಿವೈವಿ

byv
Published on

ಬೆಂಗಳೂರು:
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ಎಸ್ಸಿ ಮತ್ತು ಎಸ್ಟಿ) ಒಳ ಮೀಸಲಾತಿಯ ವಿಷಯದಲ್ಲಿ
ಸುಪ್ರೀಂಕೋರ್ಟ್ ನೀಡಿರುವ ತೀರ್ಪು ಸ್ವಾಗತಾರ್ಹವಾದದ್ದು ಎಂದು ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್‌ಸಿ, ಎಸ್‌ಟಿ ಒಳ ಮೀಸಲಾತಿ ವರ್ಗೀಕರಣ ವಿಚಾರದಲ್ಲಿ ರಾಜ್ಯಕ್ಕೆ ಅವಕಾಶ ಕೊಟ್ಟಿದ್ದು, 3 ದಶಕಗಳ ಹೋರಾಟಕ್ಕೆ ಜಯ ಸಿಕ್ಕಿದೆ ಎಂದು ವಿಶ್ಲೇಷಿಸಿದರು.
ಒಳಮೀಸಲು ವಿಷಯದಲ್ಲಿ ಬಿಜೆಪಿ ಪರಿಶ್ರಮವಿದೆ. ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿ ಆಗಿದ್ದಾಗ ಮೀಸಲಾತಿ ಹೆಚ್ಚಿಸಿದ್ದರು. ಪ್ರಧಾನಿ ನರೇಂದ್ರ ಮೋದಿಜೀ ಅವರು ಯಾವತ್ತೂ ಸಾಮಾಜಿಕ ನ್ಯಾಯದ ಪರ ನಿಂತವರು. ಒಳ ಮೀಸಲಾತಿ ಪರವಾಗಿ ಕೇಂದ್ರ ಸರ್ಕಾರವೂ ವಕಾಲತ್ತು ಮಾಡಿತ್ತು ಎಂದರು.
ಸುಪ್ರೀಂ ಕೋರ್ಟ್ ತೀರ್ಪು ತುರ್ತಾಗಿ ಅನುಷ್ಠಾನದ ಮೂಲಕ ಎಲ್ಲ 101 ಜಾತಿಗಳಿಗೆ ನ್ಯಾಯ ಸಿಗುವಂತೆ ಮಾಡಲು ಈ ನಿಟ್ಟಿನಲ್ಲಿ ಕೂಡಲೆ ಮುಖ್ಯಮಂತ್ರಿಗಳು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net