

ಶಿವಮೊಗ್ಗ: ಸೊರಬದ ಸುರಭಿ ಸೇವಾ ಚಾರಿಟೇಬಲ್ ಟ್ರಸ್ಟ್‌ನಿಂದ ಸುರಭಿಶ್ರೀ ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಜ.20ರಂದು ಕುವೆಂಪು ರಂಗಮಂದಿರದಲ್ಲಿ ನಡೆಯಲಿದೆ. ಇದೇ ವೇಳೆ ರಾಜಕೀಯ ಕ್ಷೇತ್ರದ ಸಾಧನೆ ಗುರುತಿಸಿ ಬಿಜೆಪಿ ರಾಷ್ಟ್ರೀಯ ಸಂಸದೀಯ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರಿಗೆ ಶ್ರೀ ಅಲ್ಲಮಪ್ರಭು ಸದ್ಭಾವನ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.
ಬೆಳಗ್ಗೆ 8.30ರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು, 10.30ರಿಂದ ಸಭಾ ಕಾರ್ಯಕ್ರಮ ನಡೆಯಲಿದೆ. ಕಳೆದ ಆರು ವರ್ಷಗಳಿಂದ ಟ್ರಸ್ಟ್ ಹಲವು ಕಾರ್ಯಚಟುಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದು ವಿವಿಧ ಕ್ಷೇತ್ರದಗಳಲ್ಲಿ ಸಾಧನೆ ಮಾಡಿದವರಿಗೆ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಟ್ರಸ್ಟ್‌ನ ಅಧ್ಯಕ್ಷ ಎಸ್.ಜಿ.ರಾಮಚಂದ್ರ ಅವರು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಹೊರನಾಡು ಶ್ರೀ ಅನ್ನಪೂರ್ಣೇಶ್ವರಿ ಕ್ಷೇತ್ರದ ಧರ್ಮದರ್ಶಿ ಡಾ. ಭೀಮೇಶ್ವರ ಜೋಷಿ, ಸಿಗಂದೂರು ಕ್ಷೇತ್ರದ ಧರ್ಮದರ್ಶಿ ಡಾ. ರಾಮಪ್ಪ, ಎಂಎಲ್‌ಸಿ ಎಸ್.ರುದ್ರೇಗೌಡ, ಆನವಟ್ಟಿಯ ಎವರಾನ್ ಶಿಕ್ಷಣ ಸಂಸ್ಥೆ ಅಧ್ಯಕ್ಷ ಎಂ.ಎಸ್.ಕಾರ್ತಿಕ್ ಸಾಹುಕಾರ್, ಸಹಾಯಕ ಲೆಕ್ಕಾಧಿಕಾರಿ ಪರಶುರಾಮ ವಿ. ಕಟ್ಟೀಮನಿ, ಸರ್ಜಿ ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕ ಡಾ. ಧನಂಜಯ ಸರ್ಜಿ ಅವರಿಗೆ ಪ್ರಸಕ್ತ ಸಾಲಿನ ರಾಜ್ಯ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದರು.
ಹಾರನಹಳ್ಳಿ ಕೋಡಿಮಠದ ಮಹಾಸಂಸ್ಥಾನ ಡಾ. ಶಿವಾನಂದ ರಾಜಯೋಗೇಂದ್ರ ಸ್ವಾಮೀಜಿ, ಬೆಕ್ಕಿನಕಲ್ಮಠದ ಡಾ. ಶ್ರೀ ಮಲ್ಲಿಕಾರ್ಜುನ ಮುರುಘಾರಾಜೇಂದ್ರ ಸ್ವಾಮೀಜಿ, ಬಸವಕೇಂದ್ರದ ಡಾ. ಶ್ರೀ ಬಸವ ಮರುಳಸಿದ್ಧ ಸ್ವಾಮೀಜಿ, ಸೊರಬ ಜಡೆ ಸಂಸ್ಥಾನಮಠದ ಡಾ. ಶ್ರೀ ಮಹಾಂತ ಸ್ವಾಮೀಜಿ, ಶಿಕಾರಿಪುರ ಕಡೇನಂದಿಹಳ್ಳಿ ಮಠದ ರೇವಣಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ ಸಭಾ ಕಾರ್ಯಕ್ರಮದ ಸಾನ್ನಿಧ್ಯ ವಹಿಸುವರು. ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಉದ್ಘಾಟಿಸುವರು ಎಂದರು. ಟ್ರಸ್ಟ್‌ನ ಸತೀಶ್ ಸುದ್ದಿಗೋಷ್ಠಿಯಲ್ಲಿದ್ದರು.