

ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸೂರಜ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.
ಹೊಳೆನರಸೀಪುರದಲ್ಲಿ ದಾಖಲಾಗಿದ್ದ ಮೊದಲ ಪ್ರಕರಣದಲ್ಲಿ ಸೂರಜ್ ಬಂಧನವಾಗಿ, ಸದ್ಯ ಪರಪ್ಪನ ಅಗ್ರಹಾರದಲ್ಲಿ ಇದ್ದಾರೆ.
ಸಿಆರ್‌ಪಿಸಿ ೪೩೭ ಅಡಿ ಸೂರಜ್ ರೇವಣ್ಣ ಪರ ವಕೀಲರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ೪೨ನೇ ಎಸಿಎಂಎಂ ಕೋರ್ಟ್ ವಜಾಗೊಳಿಸಿದೆ. ಸೂರಜ್ ರೇವಣ್ಣ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ವಾದಿಸಿದರು. ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನವಾಗಿರುವ ಸೂರಜ್ ರೇವಣ್ಣಗೆ ಜುಲೈ ೧೮ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ೨೭ ವರ್ಷದ ಸಂತ್ರಸ್ತನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸೂರಜ್ ರೇವಣ್ಣ ಅವರನ್ನು ಹೊಳೆನರಸೀಪುರ ಪೊಲೀಸರು ಬಂಧಿಸಿದ್ದರು.