ಸೂರಜ್ ರೇವಣ್ಣ ಪ್ರರಕಣ; ಪ್ರತಿಕ್ರಿಯೆಗೆ ಕುಮಾರಸ್ವಾಮಿ ನಕಾರ

HD Kumaraswamy
Published on

ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿರುವ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಪ್ರಕರಣದ ಕುರಿತು ಪ್ರತಿಕ್ರಿಯೆ ನೀಡಲು ಕುಮಾರಸ್ವಾಮಿ ನಕಾರ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಅವರು, ಅವೆಲ್ಲ ನನಗೇನು ಸಂಬಂಧ, ನನ್ನನ್ನೇಕೆ ಕೇಳುತ್ತೀರಿ? ಎಂದು ಮಾಧ್ಯಮದವರ ವಿರುದ್ಧ ಗರಂ ಆದರು.

ಕಾನೂನು ಇದೆ. ಕಾನೂನು ಪ್ರಕಾರ ಕ್ರಮ ಆಗುತ್ತದೆ. ಅದನ್ನೆಲ್ಲ ನನ್ನನ್ನು ನೀವು ಕೇಳುವುದು ಸರಿಯಲ್ಲ ಎಂದು ಕುಮಾರಸ್ವಾಮಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net