ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: ಸೂರಜ್​ ರೇವಣ್ಣಗೆ 14 ದಿನಗಳ ನ್ಯಾಯಾಂಗ ಬಂಧನ

Suraj Revanna
Published on

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪೊಲೀಸರ ವಶವಾಗಿದ್ದ ಜೆಡಿಎಸ್​ ಪಕ್ಷದ ಎಂಎಲ್​ಸಿ ಸೂರಜ್ ರೇವಣ್ಣ ಅವರಿಗೆ ಇದೀಗ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ 42ನೇ ಎಸಿಎಂಎಂ ಕೋರ್ಟ್​ ಆದೇಶಿಸಿದೆ.

ವಿಧಾನಪರಿಷತ್​ ಸದಸ್ಯ ಡಾ. ಸೂರಜ್​ ರೇವಣ್ಣ ವಿರುದ್ಧ ಓರ್ವ ಯುವಕ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಎಸಗಿದ್ದಾರೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಹಾಸನ ಜಿಲ್ಲೆಯ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದಕ್ಕೆ ಪ್ರತಿಯಾಗಿ ಸೂರಜ್​ ರೇವಣ್ಣ ಅವರ ಆಪ್ತ ಸಹಾಯಕ ಕೂಡ ದೂರು ನೀಡಿದ್ದರು. ದೂರನ್ನು ಪರಿಶೀಲಿಸಿದ ನಂತರ ಪೊಲೀಸರು ಎಫ್ಐಆರ್​ ದಾಖಲಿಸಿ ತಮ್ಮ ಬಳಿ ಇರುವ ಸಾಕ್ಷ್ಯಾಧಾರಗಳನ್ನು ಕೊಡುವಂತೆ ದೂರುದಾರರಿಗೆ ಸೂಚಿಸಿದ್ದರು.

ಬಂಧನ ಸಾಧ್ಯತೆಯ ನಿರೀಕ್ಷೆ ಮಾಡದೆ ಬಂದ ಸೂರಜ್ ರೇವಣ್ಣರನ್ನು ಪೊಲೀಸರು ಅರೆಸ್ಟ್‌ ಮಾಡಿ, ಇಂದು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ವಿಚಾರಣೆಗಳ ಬಳಿಕ ಸೂರಜ್​ರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿ ಎಂದು ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್​ ಆದೇಶಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net