ಸೂರಜ್ ರೇವಣ್ಣನಿಗೆ ಜಾಮೀನು ಮಂಜೂರು

Suraj Revanna
Published on

ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೈಲುಪಾಲಾಗಿದ್ದ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರಿಗೆ ಸೋಮವಾರ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ನಡೆಸಿತು. ಈ ವೇಳೆ ವಾದ, ಪ್ರತಿವಾದವನ್ನು ಆಲಿಸಿದಂತ ನ್ಯಾಯಾಲಯವು ಸೂರಜ್ ರೇವಣ್ಣ ಅವರಿಗೆ ಜಾಮೀನು ಮಂಜೂರು ಮಾಡಿದೆ. ಸೂರಜ್ ರೇವಣ್ಣ ವಿರುದ್ಧ ಹಾಸನದ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಸಂಬಂಧ ಎರಡು ಪ್ರಕರಣಗಳು ದಾಖಲಾಗಿದ್ದವು. ಈ ಪ್ರಕರಣದಲ್ಲಿ ಜಾಮೀನು ನೀಡುವಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅವರಿಗೆ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಸಂತ್ರಸ್ತರನ್ನು ನೇರವಾಗಿ ಅಥವಾ ಪರೋಕ್ಷವಾಗಿ ಭೇಟಿಯಾಗಬಾರದು. ಅರ್ಜಿದಾರರು ಇದೇ ರೀತಿಯ ಅಪರಾಧವನ್ನು ಮಾಡಬಾರದು. ಅರ್ಜಿದಾರರು ತನಿಖಾಧಿಕಾರಿಯ ಮುಂದೆ ಹಾಜರಾಗಬೇಕು ಸೇರಿದಂತೆ ವಿವಿಧ ಷರತ್ತುಗಳನ್ನು ವಿಧಿಸಿ ನ್ಯಾಯಾಲಯವು ಸೂರಜ್ ರೇವಣ್ಣ ಅವರಿಗೆ ಜಾಮೀನು ಮಂಜೂರು ಮಾಡಿದೆ. ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಸೂರಜ್ ರೇವಣ್ಣ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದರು. ಅವರಿಗೆ ಇದೀಗ ಕೋರ್ಟ್ ಜಾಮೀನು ಮಂಜೂರು ಮಾಡಿದ್ದು, ಮಂಗಳವಾರ ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net