ಸೂರಜ್ ರೇವಣ್ಣ ಮತ್ತೆರಡು ದಿನ ಸಿಐಡಿ ಕಸ್ಟಡಿಗೆ

Suraj Revanna
Published on

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣನನ್ನು ಎರಡು ದಿನಗಳ ಕಾಲ ಸಿಐಡಿಗೆ ವಶಕ್ಕೆ ನೀಡಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಆದೇಶಿಸಿದೆ.
ಏಳು ದಿನಗಳ ಕಸ್ಟಡಿ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ಸಿಐಡಿ ಅಧಿಕಾರಿಗಳು ಸೋಮವಾರ ಆರೋಪಿ ಸೂರಜ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಬಳಿಕ ಆರೋಪಿಯ ಹೆಚ್ಚಿನ ವಿಚಾರಣೆ ಅಗತ್ಯವಿದೆ, ಧ್ವನಿ ಮಾದರಿ ಸಂಗ್ರಹಿಸಬೇಕು. ಹೀಗಾಗಿ ಆರೋಪಿಯನ್ನು ಮತ್ತೆ ಆರು ದಿನ ಕಸ್ಟಡಿಗೆ ನೀಡುವಂತೆ ಸಿಐಡಿ ಪರ ವಕೀಲರು ನ್ಯಾಯಾಲಯಕ್ಕೆ ಮನವಿ ಮಾಡಿದರು. ಪ್ರಕರಣ ಸಂಬಂಧ ಈವರೆಗೆ ಸಿಐಡಿ ತನಿಖೆಯ ಪ್ರಗತಿ ಬಗ್ಗೆ ನ್ಯಾಯಾಲಯಕ್ಕೆ ಮಾಹಿತಿ ನೀಡಿದರು. ಬಳಿಕ ನ್ಯಾಯಾಲಯವು ಆರೋಪಿ ಸೂರಜ್‌ನನ್ನು ಎರಡು ದಿನ ಸಿಐಡಿ ಕಸ್ಟಡಿಗೆ ನೀಡಿ ಆದೇಶಿಸಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net