ಸುರಪುರ ಶಾಸಕ ರಾಜಾ ವೆಂಕಟಪ್ಪ‌ ನಾಯಕ ನಿಧನ! ಸಿಎಂ ಸಂತಾಪ

Untitled design - 2024-02-25T164756.958
Published on

ಬೆಂಗಳೂರು: ಇಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಸುರಪುರ ಶಾಸಕ ರಾಜಾ ವೆಂಕಟಪ್ಪ‌ ನಾಯಕ ಕೊನೆಯುಸಿರೆಳೆದರು. ನಾಳೆ ಅವರ ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.

ಸುರಪುರದ ಕಾಂಗ್ರೆಸ್ ಶಾಸಕ‌ ರಾಜಾ ವೆಂಕಟಪ್ಪ ನಾಯಕ(67) ಇಂದು ವಿಧಿವಶರಾಗಿದ್ದಾರೆ. ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ವೆಂಕಟಪ್ಪ ನಾಯಕರವರು ಇಂದು ಬೆಂಗಳೂರಿನ‌ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದರು. ಶಾಸಕರ ನಿಧನದ ಸುದ್ದಿಗೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮುಖೇನ ಸಂತಾಪ ಸೂಚಿಸಿದ್ದಾರೆ.

"ಸುರಪುರದ ಶಾಸಕರು, ಬಹುಕಾಲದ ನನ್ನ ರಾಜಕೀಯ ಒಡನಾಡಿ ರಾಜ ವೆಂಕಟಪ್ಪ ನಾಯಕ ಅವರ ನಿಧನದ ಸುದ್ದಿ ಅತೀವ ನೋವುಂಟುಮಾಡಿದೆ. ಮೂರು ದಿನದ ಹಿಂದೆಯಷ್ಟೇ ಅವರನ್ನು ಭೇಟಿಮಾಡಿ ಆರೋಗ್ಯ ವಿಚಾರಿಸಿದ್ದೆ. ಜನಾನುರಾಗಿ ವ್ಯಕ್ತಿತ್ವದ ರಾಜಾ ವೆಂಕಟಪ್ಪ ನಾಯಕ ಅವರ ಅಗಲಿಕೆ ವೈಯಕ್ತಿಕವಾಗಿ ಮತ್ತು ರಾಜ್ಯ ರಾಜಕಾರಣಕ್ಕೆ ತುಂಬಲಾರದ ನಷ್ಟ. ಮೃತರ ಆತ್ಮಕ್ಕೆ ಶಾಂತಿ ದೊರಕಲಿ, ಅವರ ಕುಟುಂಬ ವರ್ಗ ಮತ್ತು ಅಭಿಮಾನಿಗಳಿಗೆ ನೋವು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ" ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net