

ದೆಹಲಿ: ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಸೆಪ್ಟೆಂಬರ್‌ನಲ್ಲಿ ಪ್ರಧಾನಿ ಮೋದಿಯವರ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳಲಿದ್ದು, ಈಗಾಗಲೇ ಅವರ ಅಭಿಮಾನಿಗಳಲ್ಲಿ ಸಡಗರ ಮನೆ ಮಾಡಿದೆ. ಈ ಹಿನ್ನೆಲೆ ಗುಜರಾತ್‌ನ ಸೂರತ್‌ನಲ್ಲಿ ನೆಲೆಸಿರುವ ಆರ್ಕಿಟೆಕ್ಟ್‌ಗೆ ಕೂಡ ಪ್ರಧಾನಿ ಮೋದಿ ಹುಟ್ಟುಹಬ್ಬಕ್ಕೆ ವಿಶೇಷ ಉಡುಗೊರೆಯನ್ನು ಸಿದ್ಧಪಡಿಸಿದೆ.
ಇದನ್ನೂ ಓದಿ: ಕಬ್ಬಿಣದ ಪೆಟ್ಟಿಗೆಯಲ್ಲಿ ಭಾಗಶಃ ಸುಟ್ಟಿರುವ ಯುವತಿಯ ಮೃತದೇಹ ಪತ್ತೆ..!
ಗುಜರಾತ್‌ನ ಸೂರತ್‌ನಲ್ಲಿ ವಾಸಿಸುತ್ತಿರುವ ಆರ್ಕಿಟೆಕ್ಟ್ ಇಂಜಿನಿಯರ್ ವಿಪುಲ್ ಜೆಪಿ, ವಜ್ರಗಳನ್ನು ಬಳಸಿ ಪ್ರಧಾನಿ ಮೋದಿಯವರ ಚಿತ್ರವನ್ನು ನಿರ್ಮಿಸಿದ್ದಾರೆ. ಇಲ್ಲಿ ಅಚ್ಚರಿಯ ವಿಷಯವೆಂದರೆ ವಿಪುಲ್, ಪ್ರಧಾನಿ ಮೋದಿಯವರ ಚಿತ್ರವನ್ನು ಒಂದಲ್ಲ, ಎರಡಲ್ಲ ಸುಮಾರು 7,200 ವಜ್ರಗಳಿಂದ ಸಹಾಯದಿಂದ ಚಿತ್ರವನ್ನು ವಿನ್ಯಾಸ ಮಾಡಿದ್ದು, ಈ ಚಿತ್ರವು ನೋಡಲು ಸುಂದರವಾಗಿರುವುದು ಮಾತ್ರವಲ್ಲದೆ ಮೌಲ್ಯಯುತವಾಗಿದೆ.
ಆರ್ಕಿಟೆಕ್ಟ್ ಇಂಜಿನಿಯರ್ ವಿಪುಲ್ ಜೆಪಿ, ಪ್ರಧಾನಿ ಮೋದಿಯವರ ಹುಟ್ಟುಹಬ್ಬದಂದು ಉಡುಗೊರೆಯಾಗಿ ಈ ಚಿತ್ರವನ್ನು ಮಾಡಿದ್ದೇನೆ ಎಂದು ಹೇಳಿದ್ದು, ಈ ಕುರಿತಾದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.(ಏಜೆನ್ಸೀಸ್)