ಒಳ್ಳೆ ಕೆಲಸಕ್ಕೆ ಸುರ್ಜೇವಾಲ ಸಲಹೆ, ಸೂಚನೆ

klr k.h.muniyappa
ಕೋಲಾರಮ್ಮ ದೇವಾಲಯದಲ್ಲಿ ಗುರುವಾರ ಪೂಜೆ ಸಲ್ಲಿಸಿದ ನಂತರ ಸಚಿವ ಕೆ.ಎಚ್​.ಮುನಿಯಪ್ಪ ಸುದ್ದಿಗಾರರೊಂದಿಗೆ ಮಾತನಾಡಿದರು. ಲಕ್ಷಿ$್ಮನಾರಾಯಣ, ಊರುಬಾಗಿಲು ಶ್ರೀನಿವಾಸ್​, ಪ್ರಸಾದ್​ ಬಾಬು, ಜಯದೇವ ಇದ್ದರು.
Published on

ಕೋಲಾರ: ಕಾಂಗ್ರೆಸ್​ ರಾಜ್ಯ ಉಸ್ತುವಾರಿ ಸುರ್ಜೇವಾಲ ಅವರು ಶಾಸಕರ ಸಭೆ ಕರೆದು ರಾಜ್ಯದ ಅಭಿವೃದ್ಧಿಗಾಗಿ ಸಲಹೆ ಸೂಚನೆಗಳನ್ನು ನೀಡಿದ್ದಾರೆ, ಜತೆಗೆ ಅಭಿವೃದ್ಧಿ ಹಾಗೂ ಪಕ್ಷದ ವಿಚಾರ ವಿನಿಮಯವಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್​.ಮುನಿಯಪ್ಪ ಹೇಳಿದರು.

ನಗರದ ಕೋಲಾರಮ್ಮ ದೇವಿಗೆ ಗುರುವಾರ ಪೂಜೆ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಸುರ್ಜೇವಾಲ ಅವರು ಪಕ್ಷದ ಚಟುವಟಿಕೆ ಜತೆಗೆ, ಶಾಸಕರು, ಸಚಿವರು ಅಭಿವೃದ್ಧಿಗೆ ಏನು ಕ್ರಮವಹಿಸಿದೆ ಎಂಬುದರ ಬಗ್ಗೆ ಚರ್ಚೆ ನಡೆಸಿದ್ದಾರೆ. ಚರ್ಚೆ ವೇಳೆ ಶಾಸಕರು, ಸಚಿವರು ತಮ್ಮ ಅಭಿಪ್ರಾಯಗಳನ್ನು ತಿಳಿಸಿ, ಇಲಾಖೆ, ಕ್ಷೇತ್ರದ ಅಭಿವೃದ್ಧಿ ಬಗ್ಗೆಯೂ ಮಾಹಿತಿ ನೀಡಿದ್ದಾರೆ. ಮತ್ತಷ್ಟು ಒಳ್ಳೆ ಕೆಲಸ ಮಾಡಲು ತಿಳಿಸಿದ್ದು, ಆ ನಿಟ್ಟಿನಲ್ಲಿ ಸರ್ಕಾರವನ್ನು ತೆಗೆದುಕೊಂಡು ಹೋಗಲಾಗುವುದು ಎಂದರು.

ಡಿಸಿಸಿ ಜಿಲ್ಲಾಧ್ಯಕ್ಷ ಬದಲಾವಣೆ ಕುರಿತು ಪ್ರತಿಕ್ರಿಯಿಸಿದ ಮುನಿಯಪ್ಪ, ಅಧ್ಯಕ್ಷರ ಬದಲಾವಣೆ ಸದ್ಯಕ್ಕಿಲ್ಲ, ಕೆಲವರು ತಮ್ಮ ಅಭಿಪ್ರಾಯಗಳ ಮೇರೆಗೆ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷರಿಗೆ ಬಿಟ್ಟ ವಿಚಾರ ಎಂದು ತಿಳಿಸಿದರು.

ಹಾಲಿ ಅಧ್ಯಕ್ಷ ಲಕ್ಷಿ$್ಮನಾರಾಯಣ ನೇತೃತ್ವದಲ್ಲಿ ಹಲವು ಚುನಾವಣೆಗಳು ನಡೆದಿದ್ದು ಅಭ್ಯರ್ಥಿಗಳು ನಿರೀತ ಮಟ್ಟದಲ್ಲಿ ಗೆಲುವು ಸಾಧಿಸಿದ್ದಾರೆ. ಪಕ್ಷ ಸಂಟನೆಯೂ ಉತ್ತಮವಾಗಿದೆ ಎಂದು ಹೇಳಿದರು.

ಕಾಂಗ್ರೆಸ್​ ಜಿಲ್ಲಾಧ್ಯಕ್ಷ ಲಕ್ಷಿ$್ಮನಾರಾಯಣ, ಕಾರ್ಯಾಧ್ಯಕ್ಷ ಊರುಬಾಗಿಲು ಶ್ರೀನಿವಾಸ್​, ನಗರ ಬ್ಲಾಕ್​ ಕಾಂಗ್ರೆಸ್​ ಅಧ್ಯಕ್ಷ ಪ್ರಸಾದ್​ ಬಾಬು, ಕಿಸಾನ್​ ಅಧ್ಯಕ್ಷ ನಾಗರಾಜ ಗೌಡ, ಮುಖಂಡರಾದ ಜಯದೇವ, ಸೋಮಶೇಖರ್​ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net