ಸಿಎಂ ಗೃಹ ಕಚೇರಿಯಲ್ಲಿ ನಕ್ಸಲರ ಶರಣಾಗತಿ ಸರಿಯಲ್ಲ

10 Dwd 2 Jyotiprakash Mirji
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ರಾಜ್ಯದಲ್ಲಿ ಇತ್ತೀಚೆಗೆ ನಕ್ಸಲರ ಶರಣಾಗತಿ ನಡೆದಿರುವುದು ಉತ್ತಮ ಬೆಳವಣಿಗೆ. ನಕ್ಸಲರನ್ನು ಮುಖ್ಯವಾಹಿನಿಗೆ ತರುವ ಕೆಲಸ ಒಪು÷್ಪವಂಥದ್ದು. ಆದರೆ, ಅವರನ್ನು ಪೊಲೀಸ್ ಠಾಣೆ ಅಥವಾ ನ್ಯಾಯಾಲಯದಲ್ಲಿ ಶರಣಾಗತಿ ಮಾಡಿಸುವ ಬದಲು ಸಿಎಂ ಗೃಹ ಕಚೇರಿಯಲ್ಲಿ ಶರಣಾಗತಿ ಮಾಡಿಸಿರುವುದು ಸರಿಯಲ್ಲ ಎಂದು ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಹಾಗೂ ನಿವೃತ್ತ ಐಪಿಎಸ್ ಅಧಿಕಾರಿ ಜ್ಯೋತಿಪ್ರಕಾಶ ಮಿರ್ಜಿ ಹೇಳಿದರು.

ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಕ್ಸಲರ ಶರಣಾಗತಿ ವಿಚಾರದಲ್ಲಿ ರಾಜ್ಯ ಗುಪ್ತಚರ ಇಲಾಖೆ ಎಡಿಜಿಪಿ ಹೇಮಂತ ನಿಂಬಾಳ್ಕರ್ ಉತ್ತಮ ಕೆಲಸ ಮಾಡಿದ್ದಾರೆ. ಆದರೆ, ಕಾಂಗ್ರೆಸ್ ಸರ್ಕಾರ ಇದನ್ನು ರಾಜಕೀಯ ಲಾಭ ಮತ್ತು ಪ್ರಚಾರಕ್ಕಾಗಿ ಮಾಡಿದಂತಿದೆ. ಇದು ತಪ್ಪು ಸಂದೇಶ ಹೊರಡಿಸುತ್ತದೆ ಎಂದರು.

ನಾನು ಈ ಹಿಂದೆ ಭಯೋತ್ಪಾದಕರನ್ನು ಬಂಽಸಿ ಠಾಣೆಗೆ ತಂದಿದ್ದೇನೆ. ಠಾಣೆಯಲ್ಲಿ ತಂದೆ- ತಾಯಿಯ ಭೇಟಿಗೆ ಅವಕಾಶ ಕೊಟ್ಟಿದ್ದೆ. ಸಚಿವರು, ಗೃಹಸಚಿವರ ಹತ್ತಿರ ಕರೆದೊಯ್ಯು ಕೆಲಸ ಮಾಡಿಲ್ಲ. ಗುಪ್ತಚರ ಇಲಾಖೆಯ ಕಾರ್ಯಾಚರಣೆಯ ಕ್ರೆಡಿಟ್ ಪಡೆಯುವ ಉದ್ದೇಶದಿಂದ ಸರ್ಕಾರ ಈ ರೀತಿ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜೆಡಿಎಸ್‌ಗೆ ಬರುವವರು, ಹೋಗುವವರು ಇದ್ದೇ ಇರುತ್ತಾರೆ. ಕೆಲ ಶಾಸಕರು ಕಾಂಗ್ರೆಸ್‌ನೊ0ದಿಗೆ ನಂಟು ಹೊಂದಿದ್ದಾರೆ ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆಂದರೆ ನಿಜ ಇರಬೇಕು. ಪಕ್ಷ ಸಂಘಟನೆ ನಡೆಯುತ್ತಿದ್ದು, ಮುಂಬರುವ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಾಗುವುದು ಎಂದರು.

ಸುದ್ದಿಗೋಷ್ಠಿಯಲ್ಲಿ ಮಹಾನಗರ ಜಿಲ್ಲಾ ಅದ್ಯಕ್ಷ ಗುರುರಾಜ ಹುಣಸಿಮರದ, ಗ್ರಾಮಾ0ತರ ಜಿಲ್ಲಾಧ್ಯಕ್ಷ ಬಿ.ಬಿ. ಗಂಗಾಧರಮಠ ಹಾಗೂ ಕಾರ್ಯಕರ್ತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net