ಸಮೀಕ್ಷೆ ಎಫೆಕ್ಟ್: ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್ ಮುಂದೂಡಿಕೆ

counselling
ಸಾಂದರ್ಭಿಕ ಚಿತ್ರ
Published on

ಬೆಂಗಳೂರು: ರಾಜ್ಯದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಶಿಕ್ಷಕರು ಪಾಲ್ಗೊಂಡಿರುವ ಕಾರಣ ಏಕ ಕಾಲದಲ್ಲಿ ವರ್ಗಾವನೆ ಕೌನ್ಸೆಲಿಂಗ್ ಹಾಗೂ ಸಮೀಕ್ಷೆಯಲ್ಲಿ ತೊಡಗಿಸಿಕೊಳ್ಳಲು ಸಮಸ್ಯೆಯಾಗಲಿದೆ. ಈ ಕಾರಣದಿಂದ ಗುರುವಾರದಿಂದ ಆರಂಭವಾಗಬೇಕಿದ್ದ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್ ಅನ್ನು ಮುಂದೂಡಲಾಗಿದೆ.

ಮುಂದಿನ ಎಲ್ಲ ರೀತಿಯ ಕೌನ್ಸೆಲಿಂಗ್ ದಿನಾಂಕಗಳನ್ನು ಪರಿಷ್ಕೃತ ವರ್ಗಾವಣಾ ವೇಳಾಪಟ್ಟಿಯಲ್ಲಿ ಪ್ರಕಟಿಸಲಾಗುವುದು ಎಂದು ಶಾಲಾ ಶಿಕ್ಷಣ ಇಲಾಖೆ ಕಚೇರಿಯು ಪ್ರಕಟಣೆ ಹೊರಡಿಸಿದೆ.

ಈ ಮೂಲಕ 2024-25ನೇ ಸಾಲಿನ ವರ್ಗಾವಣೆ ಕೌನ್ಸೆಲಿಂಗ್ ಪ್ರಕ್ರಿಯೆಯನ್ನು ನಾಲ್ಕನೇ ಬಾರಿ ಮುಂದೂಡಿದೆ. ಮೊದಲ ವೇಳಾಪಟ್ಟಿ ಪ್ರಕಾರ ಜೂನ್ ತಿಂಗಳಿನಲ್ಲಯೇ ಪ್ರಕ್ರಿಯೆ ಪೂರ್ಣಗೊಳ್ಳಬೇಕಿತ್ತು. ಆದರೆ, ಹೆಚ್ಚುವರಿ ಶಿಕ್ಷಕರ ಹೊಂದಾಣಿಕೆ ಸಮಸ್ಯೆಯಿಂದಾಗಿ ಮೂರು ಬಾರಿ ಮುಂದೂಡಿತ್ತು. ಈಗ ಸಮೀಕ್ಷೆ ಕಾನಣಕ್ಕೆ ಮುಂದೂಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net