ಜನರ ಆರೋಗ್ಯದ ಸಮೀಕ್ಷೆ ನಡೆಸಿ

27
Published on

ಮೈಸೂರು: ಎಲ್ಲ ಆಶಾ ಕಾರ್ಯಕರ್ತೆಯರು ಮನೆ ಮನೆ ಭೇಟಿ ನೀಡಿ ಆರೋಗ್ಯ ಮತ್ತು ಸ್ವಚ್ಛತೆ ಬಗ್ಗೆ ಜನರಿಗೆ ಹೆಚ್ಚಿನ ಅರಿವು ಮೂಡಿಸಿ, ಜನತೆಯ ಆರೋಗ್ಯದ ಬಗ್ಗೆ ಸಮೀಕ್ಷೆ ನಡೆಸುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ.ಗಾಯತ್ರಿ ಸೂಚನೆ ನೀಡಿದರು.
ಸಾಲಿಗ್ರಾಮ ತಾಲೂಕಿನ ಶೀಗೆವಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಟ್ಟಹಳ್ಳಿ ಗ್ರಾಮದಲ್ಲಿ ವಾಂತಿ-ಭೇದಿಯಿಂದಾಗಿ ಅಸ್ವಸ್ಥಗೊಂಡು ಚಿಕಿತ್ಸೆ ಪಡೆಯುತ್ತಿರುವ ತಾತ್ಕಾಲಿಕ ಆರೋಗ್ಯ ಕೇಂದ್ರಕ್ಕೆ ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿದರು.
ಆಶಾ ಕಾರ್ಯಕರ್ತೆಯರು ತಂಡ ರಚಿಸಿ ಗ್ರಾಮದ ಪ್ರತಿಯೊಂದು ಮನೆ-ಮನೆಗೆ ಭೇಟಿ ನೀಡಬೇಕು. ಮಕ್ಕಳಿಂದ ವೃದ್ಧರವರೆಗೂ ಆರೋಗ್ಯ ವಿಚಾರಣೆ ನಡೆಸಿ. ಮನೆಯ ಶುಚಿತ್ವ, ಶುದ್ಧ ಕುಡಿಯುವ ನೀರು ಹಾಗೂ ಒಆರ್‌ಎಸ್ ಪುಡಿಯನ್ನು ಸೇವಿಸುವ ಬಗ್ಗೆ ಮಾಹಿತಿ ನೀಡಬೇಕು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net