ಆಯುರ್ವೇದ, ಯೋಗದಿಂದ ಜಗತ್ತಿನ ಉಳಿವು

chenni yoga
ಜಿಲ್ಲಾಡಳಿತದಿಂದ ಏರ್ಪಡಿಸಿದ್ದ ಯೋಗ ದಿನಾಚರಣೆಯಲ್ಲಿ ಎಸ್.ಎನ್.ಚನ್ನಬಸಪ್ಪ ಮಾತನಾಡಿದರು. ಡಾ. ಪತಂಜಲಿ, ಡಾ. ಕವಿತಾ ಯೋಗಪ್ಪನವರ್, ಡಾ. ನಟರಾಜ್, ಡಾ. ಎಂ.ಎಸ್.ದೊಡ್ಡಮನಿ ಇತರರಿದ್ದರು.
Published on

ಶಿವಮೊಗ್ಗ: ಸ್ವಯಂ ಮತ್ತು ಸಮಾಜಕ್ಕಾಗಿ ಯೋಗ ಎಂಬ ಪರಿಕಲ್ಪನೆಯೊಂದಿಗೆ ಯೋಗದಲ್ಲಿ ತೊಡಗಬೇಕು. ಆಯುರ್ವೇದ ಹಾಗೂ ಯೋಗದಿಂದ ಜಗತ್ತು ಉಳಿಯುತ್ತದೆ ಎಂಬುದು ನಿಶ್ಚಿತ ನಂಬಿಕೆ ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಹೇಳಿದರು.

ಜಿಲ್ಲಾಡಳಿತದಿಂದ ಶುಕ್ರವಾರ ಏರ್ಪಡಿಸಿದ್ದ ಯೋಗ ದಿನಾಚರಣೆಯಲ್ಲಿ ಮಾತನಾಡಿದ ಅವರು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಯೋಗ ದಿನಾಚರಣೆ ಜಾರಿಗೆ ಬರುವಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಶ್ರಮ ಅಪಾರ ಎಂದರು.
ಯೋಗ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ನಗರಪಾಲಿಕೆ ಆಯುಕ್ತೆ ಡಾ. ಕವಿತಾ ಯೋಗಪ್ಪನವರ್, ಬದಲಾಗುತ್ತಿರುವ ಜೀವನ ಶೈಲಿ, ಆಹಾರ ಪದ್ಧತಿ ಹಾಗೂ ಒತ್ತಡದ ಬದುಕಿನ ಈ ಕಾಲಘಟ್ಟದಲ್ಲಿ ಯೋಗಾಭ್ಯಾಸ ಅತ್ಯಂತ ಸಹಕಾರಿ ಎಂದರು.
ಡಿಎಚ್‌ಒ ಡಾ.ನಟರಾಜ್ ಮಾತನಾಡಿ, ಯೋಗಾಭ್ಯಾಸ ದೈಹಿಕ ಮತ್ತು ಮಾನಸಿಕವಾಗಿ ಬಲ ನೀಡುತ್ತದೆ. ಆಧುನಿಕ ಯುಗದಲ್ಲಿ ಮಾನಸಿಕ ಒತ್ತಡಕ್ಕೆ ಉತ್ತಮ ಮದ್ದು ಎಂದರೆ ಅದು ಯೋಗ ಮಾತ್ರ ಎಂದು ತಿಳಿಸಿದರು.
ಆಯುರ್ವೇದ ಕಾಲೇಜಿನ ಉಪ ಮುಖ್ಯ ವೈದ್ಯಾಧಿಕಾರಿ ಡಾ.ಪತಂಜಲಿ, ವೈದ್ಯೆ ಡಾ. ಹರ್ಷಿತಾ, ಜಿಲ್ಲಾ ಆಯುಷ್ ಅಧಿಕಾರಿ ಡಾ.ಲಿಂಗರಾಜ್ ಎಸ್. ಹಿಂಡಸಗಟ್ಟಿ, ಸರ್ಕಾರಿ ಆಯುರ್ವೇದ ಕಾಲೇಜಿನ ಪ್ರಾಚಾರ್ಯ ಡಾ.ಎಂ.ಎಸ್.ದೊಡ್ಡಮನಿ, ಬಾಪೂಜಿ ಆಯುರ್ವೇದ ಮಹಾ ವಿದ್ಯಾಲಯ ಪ್ರಾಚಾರ್ಯ ಪಂಕಜ್‌ಕುಮಾರ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net