ನ.24ಕ್ಕೆ 53ನೇ CJI ಆಗಿ ಅಧಿಕಾರ ವಹಿಸಿಕೊಳ್ಳಲಿರುವ ಸೂರ್ಯಕಾಂತ್!

Bbau - 2025-10-30T191702.963
Published on

ನವದೆಹಲಿ: ಇದೇ ನ.23 ರಂದು ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರು ನಿವೃತ್ತರಾಗುವ ಹಿನ್ನೆಲೆ ನ.24 ರಿಂದ ಜಾರಿಗೆ ಬರುವಂತೆ ಸುಪ್ರೀಂ ಕೋರ್ಟ್‌ನ ಎರಡನೇ ಹಿರಿಯ ನ್ಯಾಯಾಧೀಶರಾದ ನ್ಯಾಯಮೂರ್ತಿ ಸೂರ್ಯಕಾಂತ್ ಅವರನ್ನು ರಾಷ್ಟ್ರಪತಿ ದೌಪದಿ ಮುರ್ಮು ಗುರುವಾರ ಭಾರತದ CJI ಆಗಿ ನೇಮಿಸಿದ್ದಾರೆ.

ಭಾರತದ ಸಂವಿಧಾನವು ನೀಡಿರುವ ಅಧಿಕಾರವನ್ನು ಚಲಾಯಿಸಿ, ರಾಷ್ಟ್ರಪತಿಗಳು ಭಾರತದ ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ ಸೂರ್ಯಕಾಂತ್ ಅವರನ್ನು ನವೆಂಬರ್ 24, 2025 ರಿಂದ ಜಾರಿಗೆ ಬರುವಂತೆ ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಲು ಸಂತೋಷಪಡುತ್ತಾರೆ" ಎಂದು ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವ ಅರ್ಜುನ್ ರಾಮ್ ಮೇಘವಾಲ್ ಈ ಬೆಳವಣಿಗೆಯನ್ನು ದೃಢಪಡಿಸಿದ್ದಾರೆ. ಅಲ್ಲದೆ, ಈ ಕುರಿತು ತಮ್ಮ ಎಕ್ಸ್ ವೇದಿಕೆಯಲ್ಲಿ ಪೋಸ್ಟ್​ ಮಾಡಿದ್ದಾರೆ. 53 ನೇ ಸಿಜೆಐ ಆಗಿ, ನ್ಯಾಯಮೂರ್ತಿ ಸೂರ್ಯಕಾಂತ್ 2027ರ ಫೆಬ್ರವರಿ 9ರವರೆಗೆ ಅಧಿಕಾರದಲ್ಲಿರುತ್ತಾರೆ.

ನ್ಯಾ. ಸೂರ್ಯಕಾಂತ್ ಅವರನ್ನು ಸಿಜೆಐ ಬಿ.ಆರ್.ಗವಾಯಿ ಸೋಮವಾರ(ಅ. 27) ಕೇಂದ್ರ ಕಾನೂನು ಸಚಿವಾಲಯಕ್ಕೆ ಶಿಫಾರಸು ಮಾಡಿದ್ದರು.(ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net