ಸುಶಾಂತ್ ಪ್ರಕರಣಕ್ಕೆ ದುಬೈ ನಂಟು?

Sushant
Published on

ನವದೆಹಲಿ: ಬಾಲಿವುಡ್ ನಟ ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣದಲ್ಲಿ ರಾಜಕೀಯವೂ ಸೇರಿಕೊಂಡಿದೆ. ಇದು ಅಕ್ರಮ ಹಣ ವರ್ಗಾವಣೆಯಿಂದಾಗಿ ಅಥವಾ ದುಬೈನ ಸುಪಾರಿ ಕಿಲ್ಲರ್​ಗಳಿಂದಾಗಿ ನಡೆದ ಕೊಲೆ ಎನ್ನುವ ಆರೋಪ ತಳ್ಳಿ ಹಾಕುವಂತಿಲ್ಲ ಎಂದು ಬಿಜೆಪಿ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ.

ವಿಶ್ವದಲ್ಲಿ ಎಲ್ಲೂ ‘ಪರ್ಫೆಕ್ಟ್ ಕ್ರೈಂ’ ಮಾಡಲು ಸಾಧ್ಯವಿಲ್ಲ. ಹಾಗೆಯೇ ಸುಶಾಂತ್ ಅವರ ಸಾವಿನಲ್ಲೂ ಕೆಲವು ಸೂಕ್ಷ್ಮ ಸಾಕ್ಷಾಧಾರಗಳು ಕಾಣಿಸಿಕೊಂಡಿವೆ ಎಂದಿದ್ದಾರೆ. ಸ್ವಾಮಿ ಆರೋಪಕ್ಕೆ ಪ್ರತಿಕ್ರಿಯಿಸಿರುವ ಬಿಜೆಪಿ ಶಾಸಕ ರಾಮ್ ಕದಮ್ ಸುಶಾಂತ್ ಸಾವಿನ ಪ್ರಕರಣವನ್ನು ಎಲ್ಲ ದೃಷ್ಟಿಕೋನದಿಂದ ತನಿಖೆ ಮಾಡಲಾಗುತ್ತಿದೆ. ಜಾರಿ ನಿರ್ದೇಶನಾಲಯ ಮತ್ತು ಸಿಬಿಐ ಅಧಿಕಾರಿಗಳು ಎಲ್ಲ ರೀತಿಯ ಪರಿಶೀಲನೆಗಳನ್ನು ಮಾಡುತ್ತಿದ್ದಾರೆ ಎಂದಿದ್ದಾರೆ.

ಸುಶಾಂತ್ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸುವಂತೆ ಸುಪ್ರೀಂ ಕೋರ್ಟ್ ಮುಂಬೈ ಪೊಲೀಸರಿಗೆ ಆದೇಶಿಸಿದೆ. ಅಕ್ರಮ ಹಣ ವರ್ಗಾವಣೆ ಬಗ್ಗೆ ಜಾರಿ ನಿರ್ದೇಶನಾಲಯ ವಿಚಾರಣೆ ನಡೆಸುತ್ತಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net