ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ

lockdown-diaries-sushant-singh-rajput-reveals-his-meta-skills-to-manage-time-001
Published on

ಮುಂಬೈ: ಬಾಲಿವುಡ್​ನ ಉದಯೋನ್ಮುಖ ನಟ 34 ವರ್ಷದ ಸುಶಾಂತ್ ಸಿಂಗ್ ರಜಪೂತ್​ ಮುಂಬೈನಲ್ಲಿನ ತಮ್ಮ ಬಾಂದ್ರಾ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ  ಮಾಡಿಕೊಂಡಿದ್ದಾರೆ. ಮುಂಬೈನ ಬಾಂದ್ರಾ ಮನೆಯಿಂದ ಈಗಷ್ಟೇ ಈ ಬಗ್ಗೆ ಮಾಹಿತಿ ಹೊರಬಿದ್ದಿದ್ದು, ಇಡೀ ಬಾಲಿವುಡ್ ಮಂದಿ ಶಾಕ್​ಗೆ ಒಳಗಾಗಿದ್ದಾರೆ. ಬಾಂದ್ರಾದ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.

ಸುಶಾಂತ್ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣ ಏನು ಎಂಬುದು ಇನ್ನೂ ತಿಳಿದು ಬಂದಿಲ್ಲ. ರೂಮಿನಲ್ಲಿ ಯಾವುದೇ ಸೂಸೈಡ್ ನೋಟ್ ಸಿಕ್ಕಿಲ್ಲ. ಲಾಕ್ಡೌನ್ ನಿಂದಾಗಿ ಯಾವುದೇ ಹೊಸ ಪ್ರಾಜೆಕ್ಟ್ ಸಿಗದೆ ಮಾನಸಿಕವಾಗಿ ಖಿನ್ನತೆಗೆ ಒಳಗಾಗಿರಬಹುದು ಎಂದು ಅನುಮಾನ ವ್ಯಕ್ತವಾಗಿದೆ.

2013ರಲ್ಲಿ ಕಾಯ್ ಪೋ ಚೇ ಸಿನಿಮಾ ಮೂಲಕ ಬಾಲಿವುಡ್​ಗೆ ಎಂಟ್ರಿ ಪಡೆದಿದ್ದ ಸುಶಾಂತ್, ಅದಾದ ಬಳಿಕ ಸಾಲು ಸಾಲು ಸಿನಿಮಾಗಳಲ್ಲಿ ನಟಿಸಿದರು. ಶುದ್ದ್ ದೇಸಿ ರೊಮ್ಯಾನ್ಸ್, ಪಿಕೆ ಸಿನಿಮಾಗಳು ಹೆಸರು ತಂದುಕೊಟ್ಟವು. 2016ರಲ್ಲಿ ಎಂಎಸ್. ಧೋನಿ ದಿ ಅನ್​ಟೋಲ್ಡ್ ಸ್ಟೋರಿ ಸಿನಿಮಾ ಬಿಡುಗಡೆ ಆಯಿತೋ ಅಲ್ಲಿಂದ ಸುಶಾಂತ್ ಲಕ್​ ಬದಲಾಯಿತು. ಅದಾದ ಬಳಿಕ ರಾಬ್ತಾ, ವೆಲ್​ಕಮ್​ ಟೂ ನ್ಯೂ ಯಾರ್ಕ್​, ಕೇದಾರ್​ನಾಥ್​, ಸೋನ್​ಚಿರಿಯಾ, ಛಿಚ್ಚೋರೆ ಸಿನಿಮಾಗಳ ಮೂಲಕ ಗಮನಸೆಳೆದರು. ಇನ್ನೇನು ದಿಲ್ ಬೇಚಾರ ಸಿನಿಮಾ ಮೇ ತಿಂಗಳಲ್ಲಿ ಬಿಡುಗಡೆ ಆಗಬೇಕಿತ್ತು.

ಇತ್ತೀಚೆಗಷ್ಟೇ (ಜೂನ್ 9) ಸುಶಾಂತ್ ಸಿಂಗ್ ಮ್ಯಾನೇಜರ್​ ದಿಶಾ ಸಾಲಿಯಾನ್​ ಆತ್ಮಹತ್ಯೆ ಮಾಡಿಕೊಂಡಿದ್ದರು. ಮನೆಯ 14ನೇ ಮಹಡಿಯಿಂದ ಹಾರಿ ದಿಶಾ ಆತ್ಮಹತ್ಯೆಗೆ ಮಾಡಿಕೊಂಡಿದ್ದರು. ಮಂಗಳವಾರ ಮುಂಬೈನಲ್ಲಿ ಈ ಘಟನೆ ನಡೆದಿತ್ತು. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಆಸ್ಪತ್ರೆಗೆ ಹೋಗುವ ಮೊದಲೆ ದಿಶಾ ಪ್ರಾಣಪಕ್ಷಿ ಹಾರಿಹೋಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net