ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳಿದ್ದ ಪ್ರಯಾಣಿಕನಲ್ಲಿ ಶಂಕಿತ ಕೊರೊನಾ ವೈರಸ್​ ಸೋಂಕು

Corona 3 March 20
Published on

ಚಿಕ್ಕಬಳ್ಳಾಪುರ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ವ್ಯಕ್ತಿಯೋರ್ವರಲ್ಲಿ ಶಂಕಿತ ಕೊರೊನಾ ವೈರಸ್​ ಪತ್ತೆಯಾಗಿದೆ.

ಸ್ಕ್ರೀನಿಂಗ್ ತಪಾಸಣೆ ವೇಳೆ ಈ ಪ್ರಯಾಣಿಕನಲ್ಲಿ ಕೊರೊನಾ ಸೋಂಕಿನ ಲಕ್ಷಣಗಳು ಕಂಡುಬಂದಿದ್ದು, ಅವರನ್ನು ರಾಜೀವ ಗಾಂಧಿ ಹೃದ್ರೋಗ ಆಸ್ಪತ್ರೆಗೆ ಆಂಬುಲೆನ್ಸ್​ನಲ್ಲಿ ಕರೆದುಕೊಂಡು ಹೋಗಲಾಗುವುದು ಎಂದು ಆರೋಗ್ಯ ಸಿಬ್ಬಂದಿ ತಿಳಿಸಿದ್ದಾರೆ.

ಆ ವ್ಯಕ್ತಿಗೆ ಸೋಂಕು ತಗುಲಿರುವ ಶಂಕೆ ವ್ಯಕ್ತವಾಗಿದ್ದು, ರಕ್ತದ ಮಾದರಿ ಪರಿಶೀಲನೆ ಬಳಿಕವಷ್ಟೇ ದೃಢಪಡಲಿದೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net