ಗೃಹಿಣಿ ಅನುಮಾನಸ್ಪದ ಸಾವು

suicide
Published on

ಬೆಂಗಳೂರು: ಆರ್.ಟಿ. ನಗರದಲ್ಲಿ ಗೃಹಿಣಿ ಅನುಮಾನಸ್ಪದವಾಗಿ ಸಾವನ್ನಪ್ಪಿದ್ದು, ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.

ದಾಸಪ್ಪ ಗಾರ್ಡನ್ ನಿವಾಸಿ ರಂಜಿತಾ (25) ಮೃತೆ. ಈ ಸಂಬಂಧ ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಮಿಳುನಾಡು ಮೂಲದ ರಂಜಿತಾ ಮತ್ತು ಮಹಾತ್ಮ 8 ವರ್ಷದ ಹಿಂದೆ ಮದುವೆಯಾಗಿದ್ದು, ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಕುಟುಂಬದೊಂದಿಗೆ ಆರ್.ಟಿ. ನಗರದ ದಾಸಪ್ಪ ಗಾರ್ಡನ್‌ನ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು. ಮಹಾತ್ಮ ಹಣ್ಣು ವ್ಯಾಪಾರ ಮಾಡಿದರೆ, ರಂಜಿತಾ ಗೃಹಿಣಿ ಆಗಿದ್ದರು. ಗುರುವಾರ ಮಧ್ಯಾಹ್ನ 3 ಗಂಟೆಗೆ ಮನೆಯ ರೂಮ್‌ನಲ್ಲಿ ಫ್ಯಾನಿಗೆ ನೇಣು ಬಿಗಿದ ಸ್ಥಿತಿಯಲ್ಲಿ ರಂಜಿತಾ ಮೃತದೇಹ ಕಂಡುಬಂದಿದೆ.

ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬುದು ಖಚಿತವಾಗಿಲ್ಲ. ಪತಿ ಮಹಾತ್ಮ ಮದ್ಯ ವ್ಯಸನಿಯಾಗಿದ್ದು, ವಿಚಾರಣೆಗೆ ಒಳಪಡಿಸಲಾಗಿದೆ. ಮರಣೋತ್ತರ ಪರೀಕ್ಷೆ ವರದಿ ಬಂದ ಬಳಿಕ ಸಾವಿಗೆ ನಿಖರ ಕಾರಣ ತಿಳಿದುಬರಲಿದೆ. ಆರ್.ಟಿ. ನಗರ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net