ಡೊನಾಲ್ಡ್​ ಟ್ರಂಪ್​ ದಾಖಲಾಗಿರುವ ಆಸ್ಪತ್ರೆ ಬಳಿ ಅನುಮಾನಾಸ್ಪದ ಬ್ಯಾಗ್​ ಪತ್ತೆ..!

Trumph 27 may 20
Published on

ವಾಷಿಂಗ್ಟನ್: ಕರೊನಾ ವೈರಸ್​ ಸೋಂಕಿನಿಂದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಚಿಕಿತ್ಸೆಗಾಗಿ ದಾಖಲಾಗಿರುವ ಆಸ್ಪತ್ರೆಯ ಹೊರಭಾಗದಲ್ಲಿ ಅನುಮಾನಾಸ್ಪದ ಬ್ಯಾಗ್​ ಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ.

ಟ್ರಂಪ್​ ದಾಖಲಾಗಿರುವ ವಾಲ್ಟರ್​ ರೀಡ್​ ಆಸ್ಪತ್ರೆಯ ಹೊರಭಾಗದಲ್ಲಿ ಬ್ಯಾಗ್​ ಪತ್ತೆಯಾಗಿದ್ದು, ಬಾಂಬ್​ ನಿಷ್ಕ್ರೀಯ ದಳ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದು, ತೀವ್ರ ನಿಗಾ ಇರಿಸಿದ್ದಾರೆ.

ಟ್ರಂಪ್​ ಹಾಗೂ ಪತ್ನಿ ಮೆಲನಿಯಾ ಟ್ರಂಪ್​ಗೆ ಅಕ್ಟೋಬರ್​ 1ರಂದು ಕರೊನಾ ಸೋಂಕು ದೃಢಪಟ್ಟಿತ್ತು. ಟ್ರಂಪ್​ ಅವರ ಉಸಿರಾಟದಲ್ಲಿ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ತೀವ್ರ ಜ್ವರ, ಕೆಮ್ಮು, ಸುಸ್ತು ಕೂಡ ಕಾಣಿಸಿಕೊಂಡಿದೆ ಎಂದು ಸಿಎನ್‌ಎನ್ ವರದಿ ಮಾಡಿದೆ. ಕರೊನಾ ಪಾಸಿಟಿವ್ ದೃಢಪಟ್ಟ ಕೂಡಲೇ ಟ್ರಂಪ್ ಅವರಿಗೆ ವೈಟ್‌ಹೌಸ್‌ನಲ್ಲೇ ಚಿಕಿತ್ಸೆ ನೀಡಲಾಗುತ್ತಿತ್ತು. ನಿನ್ನೆ ಅವರನ್ನು ವಾಲ್ಟರ್​ ರೀಡ್​ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು.

ಅಧ್ಯಕ್ಷೀಯ ಚುನಾವಣೆ ಹತ್ತಿರ ಬಂದಿದ್ದರೂ ಕರೊನಾ ದೃಢಪಟ್ಟ ಹಿನ್ನೆಲೆಯಲ್ಲಿ ಟ್ರಂಪ್ ತಮ್ಮ ಎಲ್ಲ ಅಧಿಕೃತ ಕಾರ‌್ಯಕ್ರಮಗಳನ್ನು ರದ್ದುಪಡಿಸಿದ್ದಾರೆ. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net