

ಬಳ್ಳಾರಿ: ರಾಹುಲ್ ಗಾಂಧಿ ನೇತೃತ್ವದಲ್ಲಿ ರಾಜ್ಯಾದ್ಯಂತ ಭಾರತ್ ಜೋಡೋ ಯಾತ್ರೆ ನಡೆಯುತ್ತಿದ್ದು, ಅಂಥ ಒಂದು ಜಾಗದಲ್ಲೀಗ ಬಿಜೆಪಿಯವರು ಕಸ ಗುಡಿಸುವ ಮೂಲಕ ಟಾಂಗ್ ನೀಡಿದ್ದಾರೆ. ಬಳ್ಳಾರಿ ಜಿಲ್ಲೆಯಲ್ಲಿ ಭಾರತ್ ಜೋಡೋ ಯಾತ್ರೆಗೆ ಹೀಗೊಂದು ಪ್ರತಿಕ್ರಿಯೆ ವ್ಯಕ್ತವಾಗಿದೆ.
ಕಾಂಗ್ರೆಸ್ ಸಮಾವೇಶ ನಡೆಸಿದ್ದ ಬಳ್ಳಾರಿ ಮುನ್ಸಿಪಲ್ ಮೈದಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶ್ರೀರಾಮುಲು, ಶಾಸಕ ಸೋಮಶೇಖರ್ ರೆಡ್ಡಿ ನೇತೃತ್ವದಲ್ಲಿ ಸ್ವಚ್ಛ ಭಾರತ ಅಭಿಯಾನ ನಡೆದಿದೆ. ನಿನ್ನೆ ಇಲ್ಲಿ ಭಾರತ ಜೋಡೋ ಯಾತ್ರೆಯ ಬಹಿರಂಗ ಸಮಾವೇಶ ನಡೆದಿದ್ದು, ಇಂದು ಬಿಜೆಪಿಯವರು ಪೊರಕೆ ಹಿಡಿದು ಸ್ವಚ್ಛಗೊಳಿಸಿದ್ದಾರೆ.
ಸಮಾವೇಶದ ಬಳಿಕ ಮೈದಾನದಲ್ಲಿ ಬಿದ್ದ ಪ್ಲಾಸ್ಟಿಕ್, ಕಸ ತೆಗೆಯುವ ಸಲುವಾಗಿ ರಾಮುಲು, ರೆಡ್ಡಿ ಹಾಗೂ ಬಿಜೆಪಿ ಕಾರ್ಯಕರ್ತರು ಪೊರಕೆ ಹಿಡಿದು ಗುಡಿಸಿದ್ದಾರೆ. ಈ ಮೂಲಕ ಅವರು ಕಾಂಗ್ರೆಸ್ನ ಭಾರತ್ ಜೋಡೋ ಯಾತ್ರೆಗೆ ವಿಭಿನ್ನವಾಗಿ ಟಾಂಗ್ ನೀಡಿದ್ದಾರೆ.